ಮುಂಬಯಿ : ಎರಡು ದಿನಗಳ ನಿರಂತರ ಸೋಲಿನಿಂದ ಕಂಗೆಟ್ಟಿದ್ದ ಮುಂಬಯಿ ಶೇರು ಪೇಟೆಯಲ್ಲಿ ಇಂದು ಸೋಮವಾರ, ಸೆನ್ಸೆಕ್ಸ್ 173 ಅಂಕಗಳ ಜಿಗಿತವನ್ನು ಆರಂಭಿಕ ವಹಿವಾಟಿನಲ್ಲಿ ಸಾಧಿಸಿತು. ಡಾಲರ್ ಎದುರು ಇಂದು ರೂಪಾಯಿ ಚೇತರಿಕೆಯನ್ನು ಕಂಡದ್ದು ಕೂಡ ಶೇರು ಪೇಟೆಗೆ ಉತ್ಸಾಹ ತುಂಬಿತು.
ಬೆಳಗ್ಗೆ 11.30ರ ಹೊತ್ತಿಗೆ ಸೆನ್ಸೆಕ್ಸ್ 180.49 ಅಂಕಗಳ ಮುನ್ನಡೆಯೊಂದಿಗೆ 33,529.80 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 55.60 ಅಂಕಗಳ ಮುನ್ನಡೆಯೊಂದಿಗೆ 10,085.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಮೊನ್ನೆ ಶುಕ್ರವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 340.78 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಇಂದು ಇನ್‌ಫ್ರಾಂ ಆಟೋ ರಂಗದಲ್ಲಿ ಉತ್ತಮ ಖರೀದಿ ವಹಿವಾಟು ನಡೆಯಿತು.
ಡಾಲರ್ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 14 ಪೈಸೆಗಳ ಚೇತರಿಕೆಯನ್ನು ದಾಖಲಿಸಿ 73.33 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಎಸ್ ಬ್ಯಾಂಕ್, ರಿಲಯನ್ಸ್, ಎಚ್ ಡಿ ಎಫ್ ಸಿ ಬ್ಯಾಂಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಡಾ. ರೆಡ್ಡೀಸ್ ಲ್ಯಾಬ್, ಎಸ್‌ಬಿಐ, ಸಿಪ್ಲಾ; ಟಾಪ್ ಲೂಸರ್‌ಗಳು : ಇಂಡಸ್‌ಇಂಡ್ ಬ್ಯಾಂಕ್, ಕೋಟಕ್ ಮಹೀಂದ್ರ, ಎಚ್ ಡಿ ಎಫ್ ಸಿ ಬ್ಯಾಂಕ್, ಎಚ್‌ಯುಎಲ್.