ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 293 ಅಂಕಗಳ ಭರ್ಜರಿ ಏರಿಕೆಯೊಂದಿಗೆ, ಮೂರು ತಿಂಗಳ ಗರಿಷ್ಠ ಮಟ್ಟವಾಗಿ, 35,208.14 ಅಂಕಗಳ ಮಟ್ಟವನ್ನು ತಲುಪಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 97.25 ಅಂಕಗಳ ಉತ್ತಮ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,715.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಒಟ್ಟು 261.04 ಅಂಕಗಳನ್ನು ಕಳೆದುಕೊಂಡಿದ್ದ ಸೆನ್ಸೆಕ್ಸ್ ಮಟ್ಟಿಗೆ ಇಂದಿನದು ಫೆಬ್ರವರಿ 1, 2018ರ ಅನಂತರದಲ್ಲಿನ ಗರಿಷ್ಠ ದಿನಾಂತ್ಯದ ಮಟ್ಟವಾಗಿದೆ.
ಕಳೆದ ಶುಕ್ರವಾರ ದೇಶೀಯ ಸಾಂಸ್ಥಿಕ ಹೂಡಿಕೆದಾರರು 1,084.09 ಕೋಟಿ ರೂ ಮೌಲ್ಯದ ಶೇರುಗಳನ್ನು ಖರೀದಿಸಿದರು. ಆದರೆ ಅದೇ ವೇಳೆ ವಿದೇಶೀ ಹೂಡಿಕೆದಾರರು 1,628.23 ಕೋಟಿ ರೂ. ಮೌಲ್ಯದ ಶೇರುಗಳನ್ನು ಮಾರಿದರು.
ಏಶ್ಯನ್ ಶೇರು ಪೇಟೆಗಳಲ್ಲಿ ಇಂದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. 2014ರ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕದ ಕಚ್ಚಾ ತೈಲ ಬ್ಯಾರಲ್ ಗೆ 75 ಡಾಲರ್ ಗೆ ಏರಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,841 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,405 ಶೇರುಗಳು ಮುನ್ನಡೆ ಕಂಡವು; 1,260 ಶೇರುಗಳು ಹಿನ್ನಡೆಗೆ ಗುರಿಯಾದವು; 176 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡುಬರಲಿಲ್ಲ.