ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಚುನಾವಣಾ ಪೂರ್ವ ರಾಲಿ ಇಂದು ಎರಡನೇ ದಿನವೂ ಸಾಗಿದ್ದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿದೆ.
ವಿದೇಶಿ ಹೂಡಿಕೆಯ ಒಳಹರಿವು ನಿರಂತರವಾಗಿ ಸಾಗಿರುವುದು ಮತ್ತು ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕತೆ ಕಂಡು ಬಂದಿರುವುದೇ ಸೆನ್ಸೆಕ್ಸ್ ಜಿಗಿತಕ್ಕೆ ಕಾರಣವಾಗಿದೆ.
ಬೆಳಗ್ಗೆ 11.45ರ ಸುಮಾರಿಗೆ ಸೆನ್ಸೆಕ್ಸ್ 423.44 ಅಂಕಗಳ ಮುನ್ನಡೆಯೊಂದಿಗೆ 37,477.54 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 125.90 ಅಂಕಗಳ ಏರಿಕೆಯೊಂದಿಗೆ 11,293.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಐಸಿಐಸಿಐ ಬ್ಯಾಂಕ್, ರಿಲಯನ್ಸ್, ಲಾರ್ಸನ್, ಇಂಡಸ್ ಇಂಡ್ ಬ್ಯಾಂಕ್, ಭಾರ್ತಿ ಏರ್ ಟೆಲ್ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಭಾರ್ತಿ ಏರ್‌ಟೆಲ್, ಲಾರ್ಸನ್, ಐಸಿಐಸಿಐ ಬ್ಯಾಂಕ್, ಅದಾನಿ ಪೋರ್ಟ್, ಅಲ್‌ಟ್ರಾ ಟೆಕ್ ಸಿಮೆಂಟ್; ಟಾಪ್ ಲೂಸರ್‌ಗಳು : ಭಾರ್ತಿ ಇನ್‌ಫ್ರಾಟೆಲ್, ಹೀರೋ ಮೋಟೋಕಾರ್ಪ್, ಟೆಕ್ ಮಹೀಂದ್ರ, ಇನ್‌ಫೋಸಿಸ್, ಎನ್‌ಟಿಪಿಸಿ.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 25 ಪೈಸೆಗಳ ಏರಿಕೆಯನ್ನು ದಾಖಲಿಸಿ 69.64 ರೂ.ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.