ಮುಂಬಯಿ : ದೇಶೀಯ ಹಾಗೂ ಸಾಂಸ್ಥಿಕ ಹೂಡಿಕೆದಾರರು ನಿರಂತರ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 77 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ನಿನ್ನೆ ಬುಧವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 174 ರನ್‌ಗಳ ಸೊಗಸಾದ ಏರಿಕೆಯನ್ನು ದಾಖಲಿಸಿತ್ತು. ಆರ್‌ಬಿಐ ರಿಪೋ ದರವನ್ನು ಯಥಾವತ್ತಾಗಿ ಉಳಿಸಿಕೊಂಡ ಹೊರತಾಗಿಯೂ ಮುಂಬಯಿ ಶೇರು ಪೇಟೆಯ ಉತ್ಸಾಹ ಕುಂದಿರಲಿಲ್ಲ. ಕಳೆದ ನಾಲ್ಕು ದಿನಗಳ ನಿರಂತರ ವಹಿವಾಟಿನಲ್ಲಿ ಸೆನ್ಸೆಕ್ಸ್ 512 ಅಂಕಗಳ ಮುನ್ನಡೆಯನ್ನು ಸಂಪಾದಿಸಿತ್ತು.
ಈ ಬೆಳವಣಿಗೆಯ ಹೊರತಾಗಿಯೂ ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 3.42 ಅಂಕಗಳ ನಷ್ಟಕ್ಕೆ ಗುರಿಯಾಗಿ 31,668.29 ಅಂಕಗಳ ಮಟ್ಟಕ್ಕೆ ಕುಸಿಯಿತಾದರೆ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 2 ಅಂಕಗಳ ನಷ್ಟಕ್ಕೆ ಗುರಿಯಾಗಿ 9,912.90 ಅಂಕಗಳ ಮಟ್ಟಕ್ಕೆ ಜಾರಿತ್ತು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಅರಬಿಂದೋ ಫಾರ್ಮಾ, ಎಸ್ ಬ್ಯಾಂಕ್, ಮಹೀಂದ್ರ, ಎಚ್‌ಸಿಎಲ್ ಟೆಕ್, ಟಾಟಾ ಪವರ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿ ಟಾಪ್ ಗೇನರ್ ಎನಿಸಿಕೊಂಡವು.
ಟಾಪ್ ಲೂಸರ್‌ಗಳಾಗಿ ಭಾರ್ತಿ ಇನ್‌ಫ್ರಾಟೆಲ್, ಬಿಪಿಸಿಎಲ್, ಎಚ್‌ಪಿಸಿಎಲ್, ಪವರ್ ಗ್ರಿಡ್, ಎಸ್‌ಬಿಐ ಶೇರುಗಳು ಹಿನ್ನಡೆಗೆ ಗುರಿಯದವು.