ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಚೇತರಿಕೆ ತೋರಿಬಂದಿರುವುದನ್ನು ಅನುಸರಿಸಿ ಮೈಕೊಡವಿಕೊಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರ, ಎರಡು ದಿನಗಳ ಕುಸಿತಕ್ಕೆ ಬ್ರೇಕ್ ಹಾಕಿ, 261 ಅಂಕಗಳ ಉತ್ತಮ ಜಿಗಿತದೊಂದಿಗೆ ದಿನದ ವಹಿವಾಟನ್ನು 35,547.33 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಶೇರು ಶೇ.2.44ರ ಏರಿಕೆಯನ್ನು ದಾಖಲಿಸಿ 1,019.95 ರೂ.ಗಳ ದಾಖಲೆಯ ಮಟ್ಟಕ್ಕೆ ಜಿಗಿದು ಟಾಪ್ ಗೇನರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನಿಯಾಯಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 61.60 ಅಂಕಗಳ ಏರಿಕೆಯನ್ನು ದಾಖಲಿಸಿ 10,772.05 ಅಂಕಗಳ ಮಟ್ಟಕ್ಕೇರುವ ಮೂಲಕ ದಿನದ ವಹಿವಾಟನ್ನು ಕೊನೆಗೊಳಿಸಿತು.
ದೇಶೀಯ ಹೂಡಿಕೆದಾರರು ನಿನ್ನೆ ಮಂಗಳವಾರದ ವಹಿವಟಿನಲ್ಲಿ 653.68 ಕೋಟಿ ರೂ. ಶೇರು ಖರೀದಿಸಿದ್ದರು; ವಿದೇಶಿ ಹೂಡಿಕೆದಾರರು 1,324.92 ಕೋಟಿ ರೂ. ಶೇರುಗಳನ್ನು ಮಾರಿದ್ದರು.
ಸೆನ್ಸೆಕ್ಸ್ ಕಳೆದ ಎರಡು ದಿನಗಳ ವಹಿವಾಟಿನಲ್ಲಿ 335.40 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಇಂದಿನ ವಹಿವಾಟಿನಲ್ಲಿ ಒಟ್ಟು 2,765 ಕಂಪೆನಿಗಳು ವಹಿವಾಟಿಗೆ ಒಳಪಟ್ಟಿದ್ದವು; 1,309 ಶೇರುಗಳು ಮುನ್ನಡೆ ಸಾಧಿಸಿದ್ದವು; 1,314 ಶೇರುಗಳು ಹಿನ್ನಡೆಗೆ ಗುರಿಯಾಗಿದ್ದವು; 142 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.