ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 236.10 ಅಂಕಗಳ ನಷ್ಟದೊಂದಿಗೆ 33,774.66 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 73.90 ಅಂಕಗಳ ನಷ್ಟದೊಂದಿಗೆ 10,378.40 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಪಿಎನ್‌ಬಿ ಬಹುಕೋಟಿ ವಂಚನೆ ಹಗರಣದಿಂದಾಗಿ ಹೂಡಿಕೆದಾರರ ವಿಶ್ವಾಸಕ್ಕೆ ಭಾರೀ ಏಟು ಬಿದ್ದಿರುವುದು ಬ್ಯಾಂಕ್ ಶೇರುಗಳ ವಹಿವಾಟಿನಲ್ಲಿ ಸ್ಪಷ್ಟವಾಗಿತ್ತು.
ಯೂನಿಯನ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಸಿಂಡಿಕೇಟ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್ ಶೇರುಗಳು ಇಂದು ಶೇ.4.5ರಿಂದ ಶೇ.7.5ರಷ್ಟು ಕುಸಿದವು.
ಮುಂಬಯಿ ಶೇರು ಪೇಟೆಯಲ್ಲಿಂದು 2,913 ಶೇರುಗಳು ವಹಿವಾಟಿಗೆ ಒಳಪಟ್ಟವು; 734 ಶೇರುಗಳು ಮಾತ್ರವೇ ಮುನ್ನಡೆ ಕಂಡವು; 2.017 ಶೇರುಗಳು ಹಿನ್ನಡೆಗೆ ಗುರಿಯಾದವು; 162 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.