ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಧನಾತ್ಮಕ ಸ್ಥಿತಿ ಇರುವುದನ್ನು ಅನುಲಕ್ಷಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 149 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟನಲ್ಲಿ 10,800 ಅಂಕಗಳ ಮಟ್ಟವನ್ನು ದಾಟಿ ಹೊಸ ವಿಕ್ರಮ ದಾಖಲಿಸಿತು. ದೇಶೀಯ ಹೂಡಿಕೆದಾರ ಸಂಸ್ಥೆಗಳು ಇಂದು ವ್ಯಾಪಕ ಶೇರು ಖರೀದಿಯಲ್ಲಿ ತೊಡಗಿಕೊಂಡದ್ದೇ ಮುಂಬಯಿ ಶೇರು ಪೇಟೆಯಲ್ಲಿ ತೇಜಿಗೆ ಕಾರಣವಾಯಿತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಅದಾನಿ ಪೋರ್ಟ್, ಆರ್‌ಐಎಲ್, ಭಾರ್ತಿ ಏರ್‌ಟೆಲ್, ಇಂಡಸ್ ಇಂಡ್ ಬ್ಯಾಂಕ್, ಎಸ್‌ಬಿಐ, ಎಸ್ ಬ್ಯಾಂಕ್, ಕೋಲ್ ಇಂಡಿಯಾ, ಡಾ.ರೆಡ್ಡಿ, ಏಶ್ಯನ್ ಪೇಂಟ್, ಕೋಟಕ್ ಬ್ಯಾಂಕ್, ಎನ್‌ಟಿಪಿಸಿ, ಟಾಟಾ ಸ್ಟೀಲ್, ಬಜಾಜ್ ಆಟೋ ಶೇ.1.81ರಷ್ಟು ಏರಿದವು.
ಬೆಳಗ್ಗೆ 10.25ರ ಹೊತ್ತಿಗೆ ಸೆನ್ಸೆಕ್ಸ್ 148.19 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,811.30 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 46.70 ಅಂಕಗಳ ಏರಿಕೆಯೊಂದಿಗೆ 10,560.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಾಪ್ ಗೇನರ್‌ಗಳು : ಐಡಿಯಾ ಸೆಲ್ಯುಲರ್, ಹಿಂಡಾಲ್ಕೊ, ಟಾಟಾ ಸ್ಟೀಲ್, ಬಜಾಜ್ ಫಿನ್‌ಸರ್ವ್, ಗೇಲ್; ಟಾಪ್ ಲೂಸರ್‌ಗಳು : ವೇದಾಂತ, ಎಸ್‌ಬಿಐ, ಭಾರ್ತಿ ಇನ್‌ಫ್ರಾಟೆಲ್, ಐಟಿಸಿ, ಗ್ರಾಸಿಂ.
ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 10 ಪೈಸೆ ಚೇತರಿಕೆ ಕಂಡು 67.40 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.