ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ನೂರಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು. ಹಾಗಿದ್ದರೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,200 ಕ್ಕಿಂತ ಮೇಲ್ಮಟ್ಟದಲ್ಲಿ ಉಳಿದುಕೊಳ್ಳಲು ಸಫಲವಾಯಿತು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 14 ಪೈಸೆಯ ಕುಸಿತವನ್ನು ಅನುಭವಿಸಿ 73.58 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಬೆಳಗ್ಗೆ 10.10ರ ಹೊತ್ತಿಗೆ ಸ್ವಲ್ಪ ಮಟ್ಟಿನ ಚೇತರಿಕೆಯನ್ನು ಕಂಡು 36.60 ಅಂಕಗಳ ಏರಿಕೆಯನ್ನು ಪಡೆದುಕೊಂಡು 34,104.00 ಅಂಕಗಳ ಮಟ್ಟದಲ್ಲೂ, ನಿಫ್ಟಿ 10.40 ಅಂಕಗಳ ಏರಿಕೆಯೊಂದಿಗೆ 10,261.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಐಸಿಐಸಿಐ ಬ್ಯಾಂಕ್, ಎಸ್ ಬ್ಯಾಂಕ್, ರಿಲಯನ್ಸ್, ಇಂಡಸ್ ಇಂಡ್ ಬ್ಯಾಂಕ್, ಎಸ್‌ಬಿಐ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಗ್ರಾಸಿಂ, ಎಸ್ ಬ್ಯಾಂಕ್, ಎಚ್‌ಸಿಎಲ್ ಟೆಕ್, ಗೇಲ್, ಇನ್‌ಫೋಸಿಸ್; ಟಾಪ್ ಲೂಸರ್‌ಗಳು ಬಿಪಿಸಿಎಲ್, ಎಚ್‌ಪಿಸಿಎಲ್, ಐಓಸಿ, ರಿಲಯನ್ಸ್, ಇಂಡಸ್ ಇಂಡ್ ಬ್ಯಾಂಕ್.