ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ತೋರಿಬಂದಿರುವ ಮಿಶ್ರ ಪ್ರತಿಕ್ರಿಯೆ, ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ, ಈಚಿನ ಶೇರು ಏರಿಕೆಯ ಲಾಭ ನಗದೀಕರಣ ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆಯ ಸೆನ್ಸ್‌ಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 58 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 36 ಪೈಸೆಗಳ ನಷ್ಟವನ್ನು ಅನುಭವಿಸಿ 70.04 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಬೆಳಗ್ಗೆ 10.30ರ ಹೊತ್ತಿಗೆ ಚೇತರಿಕೆ ಕಂಡ ಸೆನ್ಸೆಕ್ಸ್ 73.22 ಅಂಕಗಳ ಏರಿಕೆಯೊಂದಿಗೆ 35,923.38 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 14.10 ಅಂಕಗಳ ಏರಿಕೆಯೊಂದಿಗೆ 10,7895.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಎಸ್ ಬ್ಯಾಂಕ್, ಈಶರ್ ಮೋಟರ್, ರಿಲಯನ್ಸ್,ಇನ್‌ಫೋಸಿಸ್, ಎಚ್ ಡಿ ಎಫ್ ಸಿ ಬ್ಯಾಂಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಟಾಟಾ ಮೋಟರ್, ಸನ್ ಫಾರ್ಮಾ, ಈಶರ್ ಮೋಟರ್, ಭಾರ್ತಿ ಏರ್‌ಟೆಲ್, ಐಸಿಐಸಿಐ ಬ್ಯಾಂಕ್. ಟಾಪ್ ಲೂಸರ್‌ಗಳು : ಝೀ ಎಂಟರ್‌ಟೇನ್‌ಮೆಂಟ್, ಯುಪಿಎಲ್, ಎಕ್ಸಿಸ್ ಬ್ಯಾಂಕ್, ಟಿಸಿಎಸ್, ಅದಾನಿ ಪೋರ್ಟ್.