Advertisement

ಹುಟ್ಟುಹಬ್ಬದ ದಿನದಂದೇ ಯೋಧ ಹಜ್ರಾ ಹುತಾತ್ಮ

06:05 AM Jan 04, 2018 | Team Udayavani |

ಜಮ್ಮು: ಭಾರತ-ಪಾಕಿಸ್ಥಾನ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ಥಾನದ ಪಡೆಗಳು ಬುಧವಾರ ಸಂಜೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಗಡಿಯಲ್ಲಿ ಕಾವಲು ಕಾಯುತ್ತಿದ್ದ ಭಾರತೀಯ ಯೋಧ ಆರ್‌ಪಿ ಹಜ್ರಾ (50) ತಮ್ಮ ಹುಟ್ಟುಹಬ್ಬದ ದಿನದಂದೇ ಬಲಿಯಾಗಿದ್ದಾರೆ. 

Advertisement

ಜಮ್ಮು-ಕಾಶ್ಮೀರದ ಸಾಂಬಾ ಸೆಕ್ಟರ್‌ನಲ್ಲಿರುವ ಅಂತಾರಾಷ್ಟ್ರೀಯ ಗಡಿಯ ಬಳಿ ಸಂಜೆ 4 ಗಂಟೆ ಸುಮಾರಿಗೆ ಪಾಕಿಸ್ಥಾನ ಪಡೆಗಳು ಗುಂಡಿನ ದಾಳಿ ನಡೆಸಿವೆ. ತೀವ್ರವಾಗಿ ಗಾಯಗೊಂಡಿದ್ದ ಹಜ್ರಾ ಅವರನ್ನು ಸೇನಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಚಿಕಿತ್ಸೆ ಫ‌ಲಕಾರಿಯಾಗದೇ ಅವರು ಅಸುನೀಗಿದ್ದಾರೆ. 

ಇವರು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಮೂಲದವರು. ಕಳೆದ 27 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ಪತ್ನಿ, ಒಬ್ಬ ಪುತ್ರಿ (21) ಹಾಗೂ ಪುತ್ರನನ್ನು (18) ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next