ಹೊಸದಿಲ್ಲಿ: ಬಿಎಸ್ ಎಫ್ ಸಿಬ್ಬಂದಿಯೊಬ್ಬರು ತನ್ನ ಸಹೋದ್ಯೋಗಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ ಘಟನೆ ಇಂದು ಬೆಳಗ್ಗೆ ಪಂಜಾಬ್‌ನ ಅಮೃತಸರದಲ್ಲಿ ನಡೆದಿದೆ.
ಸಹೋದ್ಯೋಗಿಯ ಗುಂಡಿನ ದಾಳಿಗೆ ನಾಲ್ಕು ಮಂದಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆಸಿದ ಸಿಬ್ಬಂದಿಯನ್ನೂ ಹತ್ಯೆ ಮಾಡಲಾಗಿದೆ.
ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಶೂಟರ್ ನನ್ನು ಸತ್ತೆಪ್ಪ ಎಸ್ ಕೆ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಸಿಬ್ಬಂದಿ ಗಾಯಗೊಂಡಿದ್ದು, ಆತನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ:ಹೈಕೋರ್ಟ್ ಎಂದರೆ ಏನೆಂದು ತೋರಿಸುತ್ತೇವೆ : ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವ ದಿನ ಸನಿಹ
ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದಲ್ಲಿನ ಫೋರ್ಸ್ ಮೆಸ್‌ನಲ್ಲಿ ಈ ಘಟನೆ ನಡೆದಿದೆ.
ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಸತ್ಯಾಂಶ ತಿಳಿಯಲು ತನಿಖಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ.