ಪಂಜಾಬ್: ಪಂಜಾಬ್‌ನ ಫಿರೋಜ್‌ಪುರದಲ್ಲಿ ಹೆರಾಯಿನ್ ಮತ್ತು ಪಿಸ್ತೂಲ್ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಪಾಕಿಸ್ತಾನದ ಕಡೆಯಿಂದ ಬರುತ್ತಿದ್ದ ಡ್ರೋನ್ ಅನ್ನು ಗಮನಿಸಿದ ಕೂಡಲೇ ಗಡಿ ಭದ್ರತಾ ಪಡೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಬಳಿಕ ನಡೆದ ಶೋಧ ಕಾರ್ಯಾಚರಣೆಯಲ್ಲಿ ಪಿಸ್ತೂಲ್, ಹೆರಾಯಿನ್ ಇದ್ದ ಪ್ಯಾಕೆಟ್ ಜೊತೆಗೆ ಚೀನಾ ನಿರ್ಮಿತ ಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಚೀನಾ ನಿರ್ಮಿತ ಡಿಜೆಐ ಮಾವಿಕ್ 3 ಕ್ಲಾಸಿಕ್ ಡ್ರೋನ್ ನಲ್ಲಿ 500 ಗ್ರಾಂ ಹೆರಾಯಿನ್, ಪಿಸ್ತೂಲ್ ಹೊತ್ತೊಯ್ಯುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಎಸ್‌ಎಫ್ ಈ ಹಿಂದೆ ಪಂಜಾಬ್‌ನಲ್ಲಿ ಹಲವು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಮಾರ್ಚ್‌ನಲ್ಲಿ ಅಮೃತಸರ ಬಳಿ ಪಂಜಾಬ್ ಪೊಲೀಸರು ಎರಡು ಪಾಕಿಸ್ತಾನಿ ನಿರ್ಮಿತ ಡ್ರೋನ್‌ಗಳನ್ನು ವಶಪಡಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಗುರುದಾಸ್‌ಪುರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯ ಬಳಿ ಚೀನಾ ನಿರ್ಮಿತ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ.
ಇದನ್ನೂ ಓದಿ: Vijayanagara: ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು.. ಕುಸಿಯುವ ಭೀತಿ, ಆತಂಕದಲ್ಲಿ ಜನ