Advertisement

ಅಂತರ್‌ಧರ್ಮೀಯ ವಿವಾಹವಾಗಿದ್ದ BSF ಯೋಧ ಆತ್ಮಹತ್ಯೆಗೆ ಶರಣು 

09:46 AM Apr 11, 2017 | Team Udayavani |

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಣಿಕೊಪ್ಪದಲ್ಲಿ ಸೋಮವಾರ ತಡರಾತ್ರಿ ಬಿಎಸ್‌ಎಫ್ ಯೋಧನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. 

Advertisement

ಬಸವರಾಜ್‌ ಅಲಿಯಾಸ್‌ ರಫೀಕ್‌ ಮುಲ್ಲಾ  ಎಂಬ ಯೋಧ ಪತ್ನಿ ಬಶೀರಾ ಮನೆಯ ಮುಂದೆಯೇ ವಿಷ ಸೇವಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದೂ ಬದುಕಿಸಲು ಸಾಧ್ಯವಾಗಲಿಲ್ಲ.

ರಜೆ ಹಿನ್ನಲೆಯಲ್ಲಿ ಊರಿಗೆ ಬಂದಿದ್ದು, ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. 

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next