Advertisement
ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲಿನಿಂದ ಹೊರ ಬರಲು ಇದೀಗ ನಡೆಯಲಿರುವ ಗೋರಖ್‌ಪುರ್ ಮತ್ತು ಪುಲ್‌ಪುರ್ ಲೋಕಾಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿವೆ.
Related Articles
Advertisement
ಮಾಯಾವತಿ ಅವರು ರಾಜ್ಯಸಭೆಗೆ ಆಯ್ಕೆಯಾಗಲು ಎಸ್‌ಪಿ ಶಾಸಕರು ಬೆಂಬಲ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇದೇ ಒಪ್ಪಂದದ ಮೇರೆಗೆ ಮೈತ್ರಿ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಯಾಗಲು ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ್ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಚುನಾವಣೆ ಎದುರಾಗಿದೆ. ಇಲ್ಲಿ ಬಿಜೆಪಿ ಯಿಂದ ಉಪೇಂದ್ರ ಶುಕ್ಲಾ ಕಣಕ್ಕಿಳಿದಿದ್ದು, ಕಾಂಗ್ರೆಸ್ ನಿಂದ ಸುರ್‌ಹಿತ ಚಟರ್ಜಿ ಕರಿಮ್ ಅವರು ಕಣಕ್ಕಿಳಿಯಲಿದ್ದಾರೆ.
ಮಾರ್ಚ್ 11 ರಂದು 2 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಮಾರ್ಚ್ 14 ರಂದು ಫಲಿತಾಂಶ ಪ್ರಕಟವಾಗಲಿದೆ.