ಲಕ್ನೋ: ಉತ್ತರಪ್ರದೇಶ ಮಾಜಿ ಸಿಎಂ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಭಾನುವಾರ ಘೋಷಿಸಿದ್ದಾರೆ.
ಲಕ್ನೋದಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಅವರನ್ನು ರಾಷ್ಟ್ರೀಯ ಸಂಯೋಜಕರಾಗಿ ಆಕಾಶ್ ಅವರನ್ನು ಮರುನೇಮಕಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಈ ವರ್ಷದ ಮೇನಲ್ಲಿ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಮತ್ತು ಅವರ ಉತ್ತರಾಧಿಕಾರಿ ಹುದ್ದೆಯಿಂದ ತೆಗೆದುಹಾಕಿದ ನಂತರ ಈ ಬೆಳವಣಿಗೆ ನಡೆದಿದೆ. ರಾಜಕೀಯ ಪ್ರಬುದ್ಧತೆಯ ಕೊರತೆಯಿಂದಾಗಿ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗುತ್ತಿದೆ ಎಂದು ಮಾಯಾವತಿ ಈ ಹಿಂದೆ ಹೇಳಿದ್ದರು.
2019ರಲ್ಲಿ 10 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದ ಮಾಯಾವತಿಯವರ ಬಿಎಸ್‌ಪಿ 2024ರ ಲೋಕಸಭೆ ಚುನಾವಣೆಯಲ್ಲಿ ಒಂದೂ ಸ್ಥಾನವನ್ನೂ ಗೆಲ್ಲಲಿಲ್ಲ. ಈ ಹಿಂದೆ ಬಿಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಉತ್ತರ ಪ್ರದೇಶದಲ್ಲಿ 37 ಸ್ಥಾನಗಳನ್ನು ಗೆದ್ದು ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಬಿಎಸ್ಪಿ ಉತ್ತರ ಪ್ರದೇಶದ 79 ಸೇರಿದಂತೆ ದೇಶದ 424 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆಪೈಕಿ ಒಂದರಲ್ಲಿಯೂ ಗೆಲುವು ಸಾಧಿಸಲಾಗದೆ ಹೀನಾಯ ನಿರ್ವಹಣೆ ತೋರಿತ್ತು.