Advertisement

ಸ್ಥಳೀಯ ಸಂಸ್ಥೆಗಳಲ್ಲಿ ಎಲ್ಲಾ ಕಡೆ ಬಿಎಸ್ಪಿ ಸ್ಪರ್ಧೆ: ಮಹೇಶ್‌

06:45 AM May 04, 2019 | Lakshmi GovindaRaj |

ಮೈಸೂರು: ಇದೇ 29ರಂದು ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ಎಲ್ಲಾ ಕಡೆಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಶಾಸಕ ಎನ್‌.ಮಹೇಶ್‌ ಹೇಳಿದರು.

Advertisement

ಬಹುಜನ ಸಮಾಜ ಪಾರ್ಟಿ ಮೈಸೂರು ನಗರ ಘಟಕದ ವತಿಯಿಂದ ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ದುಡಿದ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತಾ ಸಮರ್ಪಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮಗೆ ಚುನಾವಣೆ ಎಂದರೆ ಭಯ ಶುರುವಾಗಿದೆ. ಈಗಷ್ಟೇ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದೇವೆ. ಈಗಾಗಲೇ ನಗರ ಸ್ಥಳೀಯ ಸಂಸ್ಥೆ ಚುನಾವಣೆಯೂ ಎದುರಾಗಿದೆ. ಹೀಗಾಗಿ ಮತ್ತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ 63 ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಜೊತೆಗೆ ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಪ್ರಾಬಲ್ಯ ಸಾಧಿಸಲಿದ್ದಾರೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿಗೆ ಹೆಚ್ಚಿನ ಮತಗಳು ಬಂದಿವೆ. ಎಲ್ಲಾ ಪಕ್ಷದ ಅಭ್ಯರ್ಥಿಗಳು ಫ‌ಲಿತಾಂಶ ಬಂದ ನಂತರ ಕೃತಜ್ಞತೆ ಸಲ್ಲಿಸುತ್ತಾರೆ. ನಾವು ಫ‌ಲಿತಾಂಶ ಬರುವ ಮುಂಚೆಯೇ ಕೃತಜ್ಞತೆ ಸಲ್ಲಿಸುತ್ತಿದ್ದೇವೆ ಎಂದರು.

Advertisement

ಕಾರ್ಯಕ್ರಮದಲ್ಲಿ ಪಕ್ಷದ ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳು ಮಾಹಿತಿ ಹಂಚಿಕೊಂಡರು. ಕೊಡಗು ಜಿಲ್ಲೆಯ ಬಿಎಸ್‌ಪಿ ಅಧ್ಯಕ್ಷ ಮೋಹನ್‌ ಮೌರ್ಯ ಮಾತನಾಡಿ, ಕೊಡಗಿನ 150 ರಿಂದ 170 ಹಳ್ಳಿಗಳನ್ನು ಸುತ್ತಿದ್ದು, ಎಲ್ಲಾ ಕಡೆ ಜನರ ಪ್ರತಿಕ್ರಿಯೆ ಉತ್ತಮವಾಗಿತ್ತು.

ನಮ್ಮ ಪಕ್ಷ ಮತ್ತಷ್ಟು ತೀವ್ರವಾಗಿ ಪ್ರತಿ ಹಳ್ಳಿಗಳಲ್ಲಿನ ಕಾರ್ಯಕರ್ತರನ್ನು ತಲುಪಬೇಕಾಗಿದೆ. ನಮ್ಮ ಕಾರ್ಯಕ್ರಮ ಹಾಗೂ ರೂಪುರೇಷೆಗಳನ್ನು ಜನಸಾಮಾನ್ಯರಿಗೆ ಮುಟ್ಟುವಂತೆ ಮಾಡಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಹಿತಕ್ಕಾಗಿ ಹಗಲಿರುಳು ಶ್ರಮಿಸಿದ ಬಿಎಸ್‌ಪಿ ಮುಖಂಡರು,

ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಈ ಸಂದರ್ಭ ಮೈಸೂರು-ಕೊಡಗು ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಡಾ.ಬಿ. ಚಂದ್ರೇಗೌಡ, ಬಿಎಸ್‌ಪಿ ಮೈಸೂರು ನಗರಾಧ್ಯಕ್ಷ ಬಸವರಾಜು, ಮೈಸೂರು ವಲಯದ ಉಸ್ತುವಾರಿ ಸೋಸಲೆ ಸಿದ್ದರಾಜು ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next