Advertisement
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಶಾಸಕ ಎನ್.ಮಹೇಶ್ ಅವರ ಅಭಿಮಾನಿಗಳ ಮತ್ತು ಬೆಂಬಲಿಗರ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಬಿಎಸ್‌ಪಿ ನನ್ನನ್ನು ಉಚ್ಛಾಟಿಸಿದ ಎರಡು ವರ್ಷ ಯಾವುದೇ ಪಕ್ಷಕ್ಕೆ ಸೇರದೆ ತಟಸ್ಥವಾಗಿದ್ದೆ. ಸಿಎಂ ಕುಮಾರಸ್ವಾಮಿ ಸರ್ಕಾರದ ಪತನವಾದ ಐದೇ ನಿಮಿಷದಲ್ಲಿ ನನ್ನನ್ನು ಬಿಎಸ್ಪಿಯಿಂದ ಉಚ್ಚಾಟನೆ ಮಾಡಲಾಯಿತು. ತಕ್ಷಣದಲ್ಲಿಯೇ ಯಾವುದೇ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ಹೇಳಿದರು.
Related Articles
Advertisement
ರಾಜ್ಯ ಮಟ್ಟದ ಪಟ್ಟಿಯಲ್ಲಿ ಅಗ್ರಸ್ಥಾನ: ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ಎನ್.ಮಹೇಶ್ ಅವರು ಪಕ್ಷದ ರಾಜ್ಯ ಮಟ್ಟದ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಇಂದು ಅವರ ದೊಡ್ಡ ಅಭಿಮಾನಿ ಬಳಗ, ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾಗಿರುವುದು ಸಂತಸ ತಂದಿದೆ ಎಂದು ತಿಳಿಸಿದರು.
ಪಕ್ಷ ಮತ್ತಷ್ಟು ಸಂಘಟಿತ:ಬಿಜೆಪಿ ವಿಭಾಗ ಪ್ರಭಾರಿ ಮೈ.ವಿ.ರವಿಶಂಕರ್ ಮಾತನಾಡಿ, ಡಾ.ಅಂಬೇಡ್ಕರ್, ಬಿಜೆಪಿ ಸಿದ್ಧಾಂತಗಳು ಒಂದಾಗುತ್ತಿದೆ. ಹೋರಾಟದ ಮೂಲಕ ಕೇಂದ್ರ, ರಾಜ್ಯದಲ್ಲಿ ಅಧಿಕಾರ ಹಿಡಿದಿದ್ದೇವೆ. ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ರಾಷ್ಟ್ರೀಯ ಮುಖ್ಯವಾಹಿನಿಗೆ ಸೇರ್ಪಡೆಯಾಗುತ್ತಿದ್ದೀರಿ. ಅಂಬೇಡ್ಕರ್ ಆಶಯಗಳನ್ನು ಬಿಜೆಪಿ ಈಡೇರಿಸುವ ಕೆಲಸ ಮಾಡುತ್ತಿದೆ. ಇದನ್ನು ನಂಬಿ ನೀವೆಲ್ಲರೂ ಸೇರ್ಪಡೆಯಾಗುತ್ತಿರುವುದು ಪಕ್ಷ ಇನ್ನಷ್ಟುಸಂಘಟಿತವಾಗಲಿದೆ ಎಂದರು. ಬಿಜೆಪಿ ಸೇರ್ಪಡೆ: ಭಾರತೀಯ ಪರಿವರ್ತನಾ ಸಂಘದ ಜಿಲ್ಲಾಧ್ಯಕ್ಷ ಬಿಎಸ್‌ಪಿ ಮುಖಂಡ ಆಲೂರುಮಲ್ಲು, ಸುರೇಶ್, ಮಾಂಬಳ್ಳಿ ಮಹದೇವು, ರಾಮಕೃಷ್ಣ ಸಿದ್ದಪ್ಪಾಜಿ ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಸುಂದರ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ಮಾಜಿ ಶಾಸಕಿ ಪರಿಮಳನಾಗಪ್ಪ ಮಾತನಾಡಿದರು. ರಾಷ್ಟ್ರೀಯ ಒಬಿಸಿ ಮೋರ್ಚಾಗಳ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಗಲ ಶಿವಕುಮಾರ್, ನಾಗಶ್ರೀ ಪ್ರತಾಪ್, ನಾರಾಯಣ ಪ್ರಸಾದ್, ನಗರಸಭಾಧ್ಯಕ್ಷೆ ಆಶಾ ನಟರಾಜು, ಉಪಾ ಧ್ಯಕ್ಷೆ ಪಿ.ಸುಧಾ, ಹಾಸನ ಪ್ರಭಾರಿ ನಿಜಗುಣರಾಜು, ಚುಡಾಧ್ಯಕ್ಷ ಶಾಂತಮೂರ್ತಿ ಕುಲಗಾಣ, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಜಯಸುಂದರ್, ಎಸ್ಸಿ ಮೋರ್ಚಾಧ್ಯಕ್ಷ ಕಿನಕಹಳ್ಳಿ ರಾಚಯ್ಯ, ಜಿಲ್ಲಾ ಕೋರ್
ಕಮಿಟಿ ಸದಸ್ಯ ಡಾ.ಎ.ಆರ್.ಬಾಬು, ಗ್ರಾಮಾಂತರ ಮಂಡಲ ಅಧ್ಯಕ್ಷ ಬಸವಣ್ಣ, ನಗರಾಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ರಾಮಸಮುದ್ರ ಶಿವು, ಎಸ್‌ಸಿ ಮೋರ್ಚಾದ ಉಪಾಧ್ಯಕ್ಷ ವೇಣುಗೋಪಾಲ್ ಮೊದಲಾದವರು ಇದ್ದರು.