Advertisement

ಚಾ.ನಗರ, ಮೈಸೂರಿನಲ್ಲಿ ಬಿಎಸ್ಪಿ ಪ್ರಬಲ ಅಭ್ಯರ್ಥಿ ಕಣಕ್ಕೆ 

07:25 AM Mar 06, 2019 | |

ಚಾಮರಾಜನಗರ: ಪಕ್ಷದ ವರಿಷ್ಠೆ ಮಾಯಾವತಿ ಆದೇಶದಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಎಸ್ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಚಿವ, ಶಾಸಕ ಎನ್‌.ಮಹೇಶ್‌ ತಿಳಿಸಿದರು.

Advertisement

ನಗರದ ವರ್ತಕರ ಭವನದಲ್ಲಿ ಬಹುಜನ ಸಮಾಜ ಪಕ್ಷದ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಚುನಾವಣೆಯ ಕಣಕ್ಕಿಳಿಸಲಾಗುವುದು.

ಕಳೆದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾದರಿಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ಮಾಡಿ ಗೆಲ್ಲುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅದಕ್ಕಾಗಿ ಇಂದಿನಿಂದ ಕಾರ್ಯಕರ್ತರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಚಾಮರಾಜನಗರ ಕ್ಷೇತ್ರದಲ್ಲಿ 3 ಲಕ್ಷ ಮತ ಪಡೆದರೆ ಗೆಲುವು ನಮ್ಮದಾಗುತ್ತದೆ ಎಂದರು. 

ಚಾಮರಾಜನಗರ, ಚಿಕ್ಕಬಳ್ಳಾಪುರ, ಬೀದರ್‌, ಕಲಬುರಗಿ, ಮೈಸೂರು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಪ್ರಬಲ ಸ್ಪರ್ಧೆವೊಡ್ಡಲಿದೆ. ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರದಲ್ಲಿ 50 ಸಾವಿರ ಮತ ಪಡೆಯಬೇಕಿದೆ ಎಂದರು. 

15 ರಂದು ಸಮಾವೇಶ: ಮಾ. 15ರಂದು ಚಾಮರಾಜನಗರದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ 32 ಹೋಬಳಿಗಳಿಂದ ತಲಾ 500 ಕಾರ್ಯಕರ್ತರಂತೆ ಒಟ್ಟು 1600 ತರಬೇತಿ ಪಡೆದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದರು. 

Advertisement

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಎಸ್‌ಪಿ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಪಕ್ಷದ ಕಾರ್ಯಕರ್ತರು ಯಾವುದೇ ವದಂತಿಗಳಿಗೆ ಕಿವಿಕೊಡಬೇಡಿ. ಕಡಿಮೆ ಖರ್ಚಿನಲ್ಲಿ ವಿಭಿನ್ನ ರೀತಿ ಚುನಾವಣಾ ಪ್ರಚಾರ ಕೈಗೊಳ್ಳುವ ತಂತ್ರ ರೂಪಿಸಲಾಗಿದೆ. ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ತನು, ಮನ, ಧನ ಕೊಟ್ಟು  ಶಕ್ತಿ ಪ್ರದರ್ಶನ ತೋರಿಸಬೇಕಿದೆ. ಕಾಂಗ್ರೆಸ್‌, ಬಿಜೆಪಿಯವರು ಪಕ್ಷದ ಕಾರ್ಯಕರ್ತರನ್ನು ಖರೀದಿಸಲು ಸಾಧ್ಯವೇ ಇಲ್ಲ ಎಂದರು.

ತಾಲೂಕು ಅಧ್ಯಕ್ಷ ಆಲೂರುಮಲ್ಲು ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಶಾಸಕ ಮಹೇಶ್‌ ಇದ್ದು, ಉಳಿದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬೂತ್‌ಮಟ್ಟದಿಂದ ಸಂಘಟನೆ ಮಾಡಿದರೆ ಪಕ್ಷದ ಅಭ್ಯರ್ಥಿ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಬಹುದು ಎಂದರು.

ಸಭೆಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ರಾಜ್ಯ ಕಾರ್ಯದರ್ಶಿ ಮಾದೇಶ್‌ ಉಪ್ಪಾರ್‌, ಮೈಸೂರು ವಲಯ ಉಸ್ತು¤ವಾರಿ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಮಾದಪ್ಪ, ಜಿಲ್ಲಾ ಉಪಾಧ್ಯಕ್ಷ ಸೋಮಣ್ಣ ಉಪ್ಪಾರ್‌, ಹಿರಿಯ ಮುಖಂಡ ಕೃಷ್ಣಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ನಗರಸಭಾ ಸದಸ್ಯ ಪ್ರಕಾಶ್‌, ಜಿಲ್ಲಾ ಖಜಾಂಚಿ ರಮೇಶ್‌, ನಗರ ಘಟಕ ಅಧ್ಯಕ್ಷ ಚಿನ್ನಸ್ವಾಮಿ, ಕಣ್ಣೇಗಾಲ ಮಹದೇವನಾಯಕ, ಎಸ್‌.ಪಿ.ಮಹೇಶ್‌, ನಂಜುಂಡಸ್ವಾಮಿ, ಪ್ರಕಾಶ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next