Advertisement

ಮೈತ್ರಿಗೆ ಬೆಂಬಲ ನೀಡದೇ ಬಿಎಸ್‌ಪಿ ಬಂಡಾಯ ತಂತ್ರ

12:53 PM Feb 27, 2018 | |

ಹುಮನಾಬಾದ: ರಾಜ್ಯದಲ್ಲಿ ಜೆಡಿಎಸ್‌ -ಬಿಎಸ್‌ಪಿ ಮೈತ್ರಿ ಮಾಡಿಕೊಂಡಿದ್ದರೂ ಕೂಡ ಬೀದರ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಎಸ್‌ಪಿ ಬೆಂಬಲ ನೀಡದೆ ಬಂಡಾಯದ ಬಾವುಟ ಹಾರಿಸುವ ತಂತ್ರಗಾರಿಕೆ ನಡೆಯುತ್ತಿದೆ.

Advertisement

ಏಳು ವರ್ಷಗಳಿಂದ ಬೀದರ ಜಿಲ್ಲೆಯಲ್ಲಿ ಬಹುಜನ ಸಮಾಜ ಪಾರ್ಟಿ ಬೆಳೆಸಿದ ಅಂಕುಶ ಗೋಖಲೆ ಇದೀಗ ಜೆಡಿಎಸ್‌ -ಬಿಎಸ್‌ಪಿ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಂಡಾಯದ ಬಾವುಟ ಹಾರಿಸುವ ಜೊತೆಗೆ ಇತರೆ ಕ್ಷೇತ್ರಗಳಲ್ಲೂ ಕೂಡ ಬಂಡಾಯ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ತಯಾರಿ ಮಾಡುತ್ತಿದ್ದಾರೆ.

ಸ್ಥಳೀಯ ಶಾಸಕ ರಾಜಶೇಖರ ಪಾಟೀಲರ ಮಧ್ಯದಲ್ಲಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ 2011-12ರಲ್ಲಿ ಬಿಎಸ್‌ಪಿ ಪಕ್ಷಕ್ಕೆ ಸೆರ್ಪಡೆಗೊಂಡು ಜಿಲ್ಲಾದ್ಯಂತ ಪಕ್ಷದ ಕಾರ್ಯಕರ್ತರನ್ನು ನೇಮಿಸಿಕೊಂಡು, ಜಿಲ್ಲಾಧ್ಯಕ್ಷರಾಗಿ ಗುರುತಿಸಿಕೊಂಡಿದ್ದರು. ಅನೇಕ ಹೋರಾಟಗಳ ಮೂಲಕ ಗುರುತಿಸಿಕೊಂಡಿರುವ ಅಂಕುಶ ಗೋಖಲೆ. 2013ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧೆ ನಡೆಸಿ, 8,093 ಮತ ಪಡೆದುಕೊಂಡು ಮೂರನೇ ಸ್ಥಾನದಲ್ಲಿದ್ದರು.

ಐದು ವರ್ಷಗಳಿಂದ ಸ್ಥಳೀಯ ಶಾಸಕ ಹಾಗೂ ಆಡಳಿತದ ವಿರುದ್ಧ ಹೋರಾಟ ಮಾಡುವ ಮೂಲಕವೇ ದಲಿತ ಸಮುದಾಯದ ಜನರನ್ನು ಸೆಳೆದಿರುವ ಇವರು 2018ರ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ತಯಾರಿ ನಡೆಸಿದ್ದರು. 

ಈ ಮಧ್ಯದಲ್ಲಿಯೇ ಜೆಡಿಎಸ್‌-ಬಿಎಸ್‌ಪಿ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಂಡಾಯದ ಬಾವುಟ ಹಾರಿಸುವ ಮೂಲಕ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿಟ್ಟಿನಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಕುರಿತು ಅಂಕುಶ ಗೋಖಲೆ ಅವರನ್ನು ಸಂಪರ್ಕಿಸಿದಾಗ,
ಹುಮನಾಬಾದ ವಿಧಾನ ಸಭೆ ಕ್ಷೇತ್ರದಲ್ಲಿ ಮೂರು ತಾಲೂಕು ಪಂಚಾಯತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
 
ಕೆಲ ಮತಗಳ ಅಂತರದಲ್ಲಿ ಒಂದು ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ ಅಭ್ಯರ್ಥಿ ಸೋಲು ಅನುಭವಿಸಿದ್ದಾರೆ. ಸಧ್ಯ ಈ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿ ಗೆಲ್ಲುವುದು ಖಚಿತ ಇತ್ತು. ಆದರೆ ಮೈತ್ರಿ ನೋವು ತಂದಿದೆ. ನಾವುಗಳು ಜೆಡಿಎಸ್‌ಗೆ ಬೆಂಬಲ ನೀಡದೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕಿಳಿಯುತ್ತಿದ್ದು, ಜೊತೆಯಲ್ಲಿ ಬಸವಕಲ್ಯಾಣ, ಭಾಲ್ಕಿ, ಬೀದರ ದಕ್ಷಿಣ ಹಾಗೂ ಔರಾದ ಕ್ಷೇತ್ರಗಳಲ್ಲಿ ಬಿಎಸ್‌ಪಿ ಅಭ್ಯರ್ಥಿಗಳು ಬಂಡಾಯದ ಬಾವುಟ ಹಾರಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು. ಕೆಲ ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಕೂಡ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. 

Advertisement

ದುರ್ಯೋಧನ ಹೂಗಾರ

Advertisement

Udayavani is now on Telegram. Click here to join our channel and stay updated with the latest news.

Next