ಚಿಕ್ಕಬಳ್ಳಾಪುರ: ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಶುಲ್ಕವನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಅಮರೇಶ್ ಅವರಿಗೆ ಮನವಿ ಸಲ್ಲಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಅವರು ಕೈಗೊಂಡ ಅವೈಜ್ಞಾನಿಕ ಲಾಕ್‍ಡೌನ್‍ನಿಂದ ದೇಶಾದ್ಯಂತ 16 ಕೋಟಿ ಅಸಂಘಟಿತ ವಲಯದ ಕಾರ್ಮಿಕರು ಮತ್ತು ಸಂಘಟಿತ ವಲಯದ 2 ಕೋಟಿಗೂ ಅಧಿಕ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಸಮೀಕ್ಷೆಗಳ ವರದಿಯನ್ನು ಬಹಿರಂಗಗೊಂಡಿದೆ ಎಂದು ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಪಿ.ವಿ.ನಾಗಪ್ಪ ದೂರಿದರು.
ಕೋವಿಡ್ 19 ಸಂಕಷ್ಟದಲ್ಲಿ ಜೀವನ ನಡೆಸಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಆದರೇ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‍ಲೈನ್ ಶಿಕ್ಷಣದ ಹೆಸರಿನಲ್ಲಿ ಸುಲಿಗೆ ಮಾಡುವ ಕೆಲಸದಲ್ಲಿ ತೊಡಗಿದ್ದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಲ್ಲಾ ವಿಷಯಗಳು ತಿಳಿದಿದ್ದರು ಏನು ತಿಳಿಯದಂತೆ ವರ್ತಿಸುತ್ತಿದ್ದಾರೆ.
ಪೋಷಕರು ಮಕ್ಕಳ ಒತ್ತಡಕ್ಕೆ ಮಣಿದು ಖಾಸಗಿ ಲೇವಾದೇವಿ ಮಾಡುವವರ ಬಳಿ ಬ್ಯಾಂಕ್‍ಗಳಲ್ಲಿ ಚಿನ್ನವನ್ನು ಅಡವಿಟ್ಟು ಸಾಲ ಮಾಡಿ ಮಕ್ಕಳಿಗೆ ಮೊಬೈಲ್ ಹಾಗೂ ಶುಲ್ಕವನ್ನು ಪಾವತಿಸುತ್ತಿದ್ದಾರೆ ಕೂಡಲೇ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಶುಲ್ಕವನ್ನು ಮನ್ನಾ ಮಾಡಿ ಅನುಕೂಲ ಕಲ್ಪಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಸಿಎಂ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಎಂ.ಮುನಿಕೃಷ್ಣಯ್ಯ,ಜಿಲ್ಲಾ ಸಂಯೋಜಕ ಎಸ್.ರಹಮತ್ತುಲ್ಲಾ, ಮೂರ್ತಿ, ಡಾ.ದ್ಯಾವಪ್ಪ, ಜಿಲ್ಲಾಧ್ಯಕ್ಷ ಅಫ್ಸರ್‍ಪಾಷ, ಉಪಾಧ್ಯಕ್ಷ ಎಂ.ಗುರಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ಕಾಂತರಾಜು, ಜಿಲ್ಲಾ ಬಾಯಿಚಾರ್ ಸಮಿತಿಯ ಅಧ್ಯಕ್ಷ ಎಂ.ಪಿ.ಮುಶ್ತಾಖ್ ಅಹಮದ್, ಜಿಲ್ಲಾ ಖಜಾಂಚಿ ಮತ್ತಿತರರು ಭಾಗವಹಿಸಿದರು.