Advertisement
2022ರ ವಿಧಾನ ಸಭಾ ಚುನಾವಣೆಯನ್ನು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಯಾವ ಮೈತ್ರಿ ಇಲ್ಲದೇ ಎದುರಿಸಲಿದೆ ಎಂದು ಹೇಳಿದೆ.
Related Articles
Advertisement
ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ, ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯನ್ನು ಪಕ್ಷ ಏಕಾಂಗಿಯಾಗಿ ಎದುರಿಸಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಯಾವತಿ, ಎಐಎಂಐಎಂ ಹಾಗೂ ಬಿಎಸ್ ಪಿ ಒಪ್ಪಂದ ಮಾಡಿಕೊಂಡು ಉತ್ತರ ಪ್ರದೇಶದ ಮುಂದಿನ ವಿಧಾನ ಸಭಾ ಚುನಾವಣೆಯನ್ನು ಎದುರಿಸಲಿವೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೇ, ಬಹುಜನ ಸಮಾಜವಾದಿ ಪಕ್ಷ ಯಾವುದೇ ಸಂದರ್ಭದಲ್ಲಿಯೂ ಮೈತ್ರಿ ಮಾಡಿಕೊಳ್ಳುವುದಕ್ಕೆ ಮುಂದಾಗುವುದಿಲ್ಲ. ಪಕ್ಷ ಏಕಾಂಗಿಯಾಗಿಯೇ ಕಣಕ್ಕಿಳಿಯಲಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರವನ್ನು ಹಿಡಿಯುವ ಭರವಸೆ ಇದೆ ಎಂದಿದ್ದರು.
ಅಂದಹಾಗೆ, ಈ ವಿಷಯದಲ್ಲಿ, ಪಂಜಾಬ್ ಹೊರತುಪಡಿಸಿ, ಯುಪಿ ಮತ್ತು ಉತ್ತರಾಖಂಡದಲ್ಲಿ … ಬಿಎಸ್ ಪಿ ಯಾವುದೇ ಪಕ್ಷದೊಂದಿಗೆ ಯಾವುದೇ ಮೈತ್ರಿಯೊಂದಿಗೆ ಕಣಕ್ಕಿಳಿಯುವುದಿಲ್ಲ ಎಂದು ಪಕ್ಷವು ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಇದನ್ನೂ ಓದಿ : ” ಕಾಶ್ಮೀರ ಪ್ರೀಮಿಯರ್ ಲೀಗ್” ನಡೆಸಲು ಮುಂದಾದ ಪಾಕಿಸ್ಥಾನ: ಬಿಸಿಸಿಐ ಆಕ್ಷೇಪ