ಲಕ್ನೋ: ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಾನ್ಕರ್ ಅವರಿಗೆ ಬೆಂಬಲ ನೀಡುವುದಾಗಿ ಬಹುಜನ್ ಸಮಾಜ ಪಕ್ಷದ ವರಿಷ್ಠೆ ಮಾಯಾವತಿ ಬುಧವಾರ (ಆಗಸ್ಟ್ 03) ಘೋಷಿಸಿದ್ದಾರೆ.
ಇ
ದನ್ನೂ ಓದಿ;ಉಳ್ಳಾಲ: ತಲಪಾಡಿ ಯುವಕನ ಮೇಲೆ ತಲವಾರು ದಾಳಿ ಯತ್ನ ಸತ್ಯಕ್ಕೆ ದೂರ; ಆಯುಕ್ತರು ಹೇಳಿದ್ದೇನು?
ದೇಶದ ಪ್ರಮುಖ ಹುದ್ದೆಯಾದ ರಾಷ್ಟ್ರಪತಿ ಆಯ್ಕೆ ವಿಚಾರದಲ್ಲಿ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಒಮ್ಮತದ ಕೊರತೆಯಿಂದಾಗಿ ಕೊನೆಗೂ ಚುನಾವಣೆ ನಡೆಯುವಂತಾಗಿತ್ತು. ಇದೀಗ ಉಪರಾಷ್ಟ್ರಪತಿ ಆಯ್ಕೆ ವಿಚಾರದಲ್ಲೂ ಹಾಗೇ ಆಗಿದ್ದು, ಆಗಸ್ಟ್ 6ರಂದು ಚುನಾವಣೆ ನಡೆಯಲಿದೆ ಎಂದು ಮಾಯಾವತಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಹಾಗೂ ಪಕ್ಷದ ಧ್ಯೇಯದ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಾನ್ಕರ್ ಅವರನ್ನು ಬೆಂಬಲಿಸಲು ಬಿಎಸ್ಪಿ ನಿರ್ಧರಿಸಿದೆ ಎಂದು ಮಾಯಾವತಿ ತಿಳಿಸಿದ್ದಾರೆ.
ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಆಗಸ್ಟ್ 10ರಂದು ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದೆ. ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿವೆ.