Advertisement

ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಒತ್ತಾಯ

03:39 PM Feb 27, 2021 | Team Udayavani |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ತಕ್ಷಣ ನಿರ್ಬಂಧಿ ಸುವಂತೆ ಒತ್ತಾಯಿಸಿ ಬಹುಜನ ಸಮಾಜ ಪಕ್ಷದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

Advertisement

ಶುಕ್ರವಾರ ನಗರದಲ್ಲಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯಾವುದೇ ಪರವಾನಗಿ ಮತ್ತು ಮುನ್ನೆಚ್ಚರಿಕೆ ಕ್ರಮಗಳಿಲ್ಲದೆ ಅಕ್ರಮವಾಗಿ ಕಲ್ಲುಕ್ವಾರಿಗಳನ್ನು ನಡೆಸುತ್ತಿದ್ದು, ಕ್ವಾರಿಗಳಲ್ಲಿ ಸಂಗ್ರಹಿಸಿರುವ ಸ್ಪೋಟಕಗಳಿಂದ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ದೂರಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲೂ ಎಲ್ಲೆಂದರಲ್ಲಿ ಕಲ್ಲುಕ್ವಾರಿಗಳು ಅಕ್ರಮವಾಗಿ ನಡೆಯುತ್ತಿವೆ. ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿರುವ ನಲ್ಲೂರಿನಲ್ಲಿ ಗಣಿಗಾರಿಕೆ ಹಲವು ವರ್ಷಗಳಿಂದ ನಡೆಯುತ್ತಿದೆ. ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸದಿರು ವುದರಿಂದ ಕಾರ್ಮಿಕರು ಜೀವ ಬಿಗಿ ಹಿಡಿದು ಕೆಲಸ ಮಾಡುವಂತಹ ಪರಿಸ್ಥಿತಿ ಇದೆ ಎಂದರು.

ಕಾರ್ಮಿಕರ ಹಿತರಕ್ಷಣೆ ಮತ್ತು ಬೇರೆ ಜಿಲ್ಲೆಗಳಲ್ಲಾದಂತೆ ನಮ್ಮ ಜಿಲ್ಲೆಯಲ್ಲೂ ಸ್ಟೋಟ ಮತ್ತು ಪ್ರಾಣಹಾನಿ ಆಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ತಕ್ಷಣ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆಗಳನ್ನು ನಿರ್ಬಂ ಧಿಸಬೇಕು. ಅಕ್ರಮವಾಗಿ ನಡೆಸುತ್ತಿರುವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಕಚೇರಿ ಕಾರ್ಯದರ್ಶಿ ಕೆ.ಆರ್‌. ಗಂಗಾಧರ್‌, ತಾಲೂಕು ಅಧ್ಯಕ್ಷ ಹರೀಶ್‌ ಮಿತ್ರ, ಜಿಲ್ಲಾ ಸಹೋದರತ್ವ ಸಮಿತಿ ಅಧ್ಯಕ್ಷೆ ಕೆ.ಬಿ. ಸುಧಾ, ಪದಾ ಧಿಕಾರಿಗಳಾದ ಕೆ.ಎಸ್‌. ಮಂಜುಳಾ, ರೇಖಾ, ವಸಂತ, ಮೋಹನ್‌, ಹುಣಸೇಮಕ್ಕಿ ಲಕ್ಷ್ಮಣ್‌, ವಿನೀತ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next