Advertisement

ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಿಎಸ್ ಪಿ ಬೆಂಬಲ: ಮಾಯಾವತಿ ಘೋಷಣೆ

11:44 AM Jun 25, 2022 | Team Udayavani |

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ಬಹುಜನ್ ಸಮಾಜ್ ಪಕ್ಷದ ವರಿಷ್ಠೆ ಮಾಯಾವತಿ ಶನಿವಾರ (ಜೂನ್ 25) ಘೋಷಿಸಿದ್ದಾರೆ.

Advertisement

ಇದನ್ನೂ ಓದಿ:ಸುಪ್ರೀಂ ಕ್ಲೀನ್ ಚಿಟ್: ಮೋದಿಜೀ ಯಾವುದೇ ನಾಟಕ ಮಾಡಿಲ್ಲ- ರಾಹುಲ್ ಗೆ ಶಾ ತಿರುಗೇಟು

ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಾವು ನಿರ್ಧರಿಸಿದ್ದೇವೆ. ನಾವು ಈ ನಿರ್ಧಾರವನ್ನು ಬಿಜೆಪಿಯನ್ನು ಅಥವಾ ಎನ್ ಡಿಎಯನ್ನು ಬೆಂಬಲಿಸಲು ಅಥವಾ ವಿರೋಧಪಕ್ಷಗಳ ವಿರುದ್ಧವಲ್ಲ. ಆದರೆ ನಮ್ಮ ಪಕ್ಷ ಮತ್ತು ಅದರ ಹೋರಾಟವನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ಮಾಯಾವತಿ ಎಎನ್ ಐಗೆ ತಿಳಿಸಿದ್ದಾರೆ.

ಏತನ್ಮಧ್ಯೆ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು.

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ಕೊಡುವಂತೆ ಸಿನ್ಹಾ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೂ ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next