Advertisement

ಬಿಎಸ್‌ವೈ ಅರ್ಜಿ ನಾಳೆ ವಿಚಾರಣೆ?

08:27 AM Aug 21, 2017 | |

ಬೆಂಗಳೂರು: ಸರ್ಕಾರಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್‌ ರದ್ದು ಕೋರಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಮಂಗಳವಾರ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.

Advertisement

ತಮ್ಮ ವಿರುದ್ಧ ಎಸಿಬಿಗೆ ದೂರು ಸಲ್ಲಿಸಿರುವ ವ್ಯಕ್ತಿಗೂ ಹಾಗೂ ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲಾಗಿದೆ ಎನ್ನಲಾದ ಜಮೀನಿಗೂ ಸಂಬಂಧವಿಲ್ಲ. ಹೀಗಾಗಿ ರಾಜಕೀಯ ಪ್ರೇರಿತವಾಗಿ ವಿನಾಕಾರಣ ತಮ್ಮ ವಿರುದ್ಧ ಎಸಿಬಿಎಫ್ ಐಆರ್‌ ದಾಖಲಿಸಿಕೊಂಡಿದೆ ಎಂದು ಆಕ್ಷೇಪಿಸಿ ಯಡಿಯೂರಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

2009ರಿಂದ 2012ರ ಅವಧಿಯಲ್ಲಿ ಯಲಹಂಕ ಹೋಬಳಿಯ ಆವಲಹಳ್ಳಿ ಗ್ರಾಮದ ಸರ್ವೇ ನಂಬರ್‌ 109/1 ರಲ್ಲಿ 3 ಎಕರೆ 6 ಗುಂಟೆ ಜಮೀನು ಡಿನೋಟಿಫಿಕೇಶ್‌ ಮಾಡಿದ ಸಂಬಂಧ ಅಂದಿನ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಡಿಎ ಹಾಗೂ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಎಸಿಬಿ ಎಫ್ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next