Advertisement

140 ಶಾಸಕರೊಂದಿಗೆ ಮತ್ತೆ  ಬಿಜೆಪಿ ಸರಕಾರ: ಬಿಎಸ್‌ವೈ 

10:18 PM Nov 20, 2021 | Team Udayavani |

ಬಾಗಲಕೋಟೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 140 ಶಾಸಕರೊಂದಿಗೆ ಮತ್ತೆ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಮುಂದಿನ ಗುರಿಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಶನಿವಾರ ಹಮ್ಮಿಕೊಂಡಿದ್ದ ಜನ ಸ್ವರಾಜ್‌ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇದಕ್ಕಾಗಿ ಮುಂದಿನ ತಿಂಗಳಿಂದ ಮತ್ತೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿಯೊಂದು ಜಿಲ್ಲೆಯ ಹಿರಿಯ-ಕಿರಿಯ ಮುಖಂಡರೊಂದಿಗೆ ಚರ್ಚಿಸಿ ಪಕ್ಷವನ್ನು ಬಲಪಡಿಸುತ್ತೇನೆ ಎಂದರು.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಅದರಲ್ಲಿ  ಕನಿಷ್ಠ 15 ಸ್ಥಾನಗಳನ್ನಾದರೂ ಗೆಲ್ಲುತ್ತೇವೆ ಎಂದು ಹೇಳಿದರು.

ವಿಧಾನ ಪರಿಷತ್‌ನಲ್ಲಿ ನಮಗೆ ಬಹು ಮತವಿಲ್ಲದ ಕಾರಣ  ಜನಪರ ಕಾನೂನು, ನೀತಿ-ನಿಯಮ ರೂಪಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಲ್ಲಿಯೂ ಬಹುಮತ ಪಡೆಯಲು ಈ ಚುನಾವಣೆ ಅತಿ ಮುಖ್ಯವಾಗಿದೆ ಎಂದರು.

ಚುನಾವಣೆ  ಸ್ಪರ್ಧೆ ವರಿಷ್ಠರ ನಿರ್ಧಾರ:

Advertisement

ನಾನು ಮುಖ್ಯಮಂತ್ರಿಯಾಗಿದ್ದಾಗಲೇ ರಾಜೀನಾಮೆ ನೀಡಿದ್ದೇನೆ. ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದು  ನನ್ನ ಆದ್ಯತೆ ವಿಷಯವಲ್ಲ.  2023ರ ವಿಧಾನಸಭೆ ಚುನಾವಣೆಯಲ್ಲಿ ನಾನು ಚುನಾವಣೆ ರಾಜಕೀಯದಲ್ಲಿ ಇರಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next