Advertisement

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

07:46 PM Nov 28, 2021 | Suhan S |

ಸಾಗರ: ಉಪವಿಭಾಗೀಯ ಮಟ್ಟದ ಕಚೇರಿಗಳನ್ನು ರದ್ದುಗೊಳಿಸಿ, ಜಿಲ್ಲಾ ಮಟ್ಟದ ಕಚೇರಿಗಳ ಮೂಲಕ ಆಡಳಿತ ನಡೆಸುವ ಸಂಬಂಧ ಚರ್ಚೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅಂತಹ ನಡೆಯ ಸಾಧಕ ಬಾಧಕಗಳ ಚರ್ಚೆ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

Advertisement

ಸಾಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಈ ಸಂಬಂಧ ಸಮಿತಿ ಮಾಡಿದ್ದಾರೆ ಎನ್ನಲಾಗಿದೆ. ಸಮಿತಿಯ ವರದಿಯನ್ನು ನೋಡಿ ಅನುಕೂಲ, ಅನಾನುಕೂಲದ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಆಡಳಿತ ನಿರ್ವಹಣೆಯಲ್ಲಿ ಇಂತಹ ಕ್ರಮ ಅವೈಜ್ಞಾನಿಕವಾಗಬಹುದು. ಆದರೆ  ಯಾವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪರಿಶೀಲನೆ ನಡೆಸಿ, ಎಲ್ಲರೂ ಒಟ್ಟಾಗಿ ಕುಳಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ವಿಧಾನ ಪರಿಷತ್ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿ ಇಲ್ಲವೋ ಅಂತಹ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ನಾನು ಜೆಡಿಎಸ್‌ನವರಿಗೆ ಮನವಿ ಮಾಡಿದ್ದೇನೆ. ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ಅವರು ಉಳಿದ ಯಾರಿಗೆ ಮತ ಕೊಡುತ್ತಾರೆ ಎಂದು ಪ್ರಶ್ನಿಸಿ, ನಮ್ಮ ಅಭ್ಯರ್ಥಿಗಳಿಗೆ ಮತ ನೀಡಬೇಕಾಗುತ್ತದೆ. ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕಡೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸ ನನಗೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next