ಪಿರಿಯಾಪಟ್ಟಣ: ತಾಲೂಕು ಬಿಜೆಪಿ ಘಟಕ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು-ಹಂಪಲ ವಿತರಿಸುವುದರ ಮೂಲಕ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬ ಆಚರಿಸಲಾಯಿತು.
ಹಿರಿಯ ಮುಖಂಡ ಆರ್.ಟಿ.ಸತೀಶ್ ಮಾತನಾಡಿ, ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ರೈತರ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ್ದರು.
ಹೋರಾಟಗಳ ಮೂಲಕ ಜನಪ್ರಿಯರಾದ ಬಿಎಸ್ವೈ ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕಮಲ ಪಕ್ಷವನ್ನು ಅಧಿಕಾರಕ್ಕೆ ತಂದು ರಾಜ್ಯದಲ್ಲಿ ಅಭಿವೃದ್ಧಿಯ ಕ್ರಾಂತಿ ನಡೆಸಿ, ಜನಪ್ರಿಯ ಕೃಷಿ ಬಜೆಟ್ ಮಂಡಿಸಿದ್ದರು ಮುಂದಿನ ಬಾರಿ ರಾಜ್ಯದ ಜನತೆ ಬಿಜೆಪಿ ಪಕ್ಷಕ್ಕೆ ಆಶೀರ್ವದಿಸಿ ಬಿಎಸ್ವೈ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷರಾದ ಪಿ.ಜೆ.ರವಿ, ಡಾ. ಪ್ರಕಾಶ್ಬಾಬುರಾವ್, ಯುವ ಮೋರ್ಚಾ ಅಧ್ಯಕ್ಷ ಪಿ.ಟಿ. ಲಕ್ಷ್ಮಿನಾರಾಯಣ, ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಜೈರಾಮ್ಗೌಡ, ಆನಂದ್ಕೊಣಸೂರು, ತಂಬಾಕು ಮಂಡಳಿ ಉಪಾಧ್ಯಕ್ಷ ಪಿ.ವಿ.ಬಸವರಾಜಪ್ಪ, ಉಪಾಧ್ಯಕ್ಷರಾದ ಕುಮಾರಸ್ವಾಮಿ, ಶಕ್ತಿಕೇಂದ್ರ ಅಧ್ಯಕ್ಷರಾದ ನಾಗೇಶ್, ಶರವಣ, ಸುಂದರ, ಟಿ.ರಮೇಶ್, ಮಹಿಳಾ ಅಧ್ಯಕ್ಷರಾದ ನಳಿನಿ, ಮುಖಂಡರಾದ ಲೋಕಪಾಲಯ್ಯ, ಮಹದೇವ್, ವಿಕ್ರಂರಾಜ್, ಬೆಮ್ಮತ್ತಿಕೃಷ್ಣ, ಮಾದಪ್ಪ ಮತ್ತಿತರಿದ್ದರು.