Advertisement

ಬಿಎಸ್ ವೈ ಲೆಕ್ಕ: ಆರ್ಥಿಕ ಅಭಿವೃದ್ಧಿ ಪ್ರಚೋದನೆಗೆ ಯಡಿಯೂರಪ್ಪ ನಿರ್ಧಾರಗಳೇನು?

09:54 AM Mar 06, 2020 | keerthan |

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಈ ಸರಕಾರದ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ಈ ಬಾರಿ 2 ಲಕ್ಷ 37 ಸಾವಿರ ಕೋಟಿಯಷ್ಟು ಗಾತ್ರದ ಬಜೆಟ್ ಅನ್ನು ಬಿಎಸ್ ವೈ ಅವರು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಇಲಾಖಾವಾರುಗಳಾಗಿ ವಿಂಗಡಿಸದೆ, ವಲಯವಾರುಗಳಾಗಿ ವಿಂಗಡಿಸಿ ಮಂಡಿಸಲಾಗಿದೆ. ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆಗಾಗಿ ಸಿಎಂ ಬಿಎಸ್ ವೈ ಕೈಗೊಂಡಿರುವ ಕಾರ್ಯಗಳೇನು ಎನ್ನುವದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Advertisement

*ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆ ಮುಂದುವರಿಕೆ, 3060 ಕೋಟಿ ರೂ. ಅನುದಾನ.

*ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ.

*ಹೊಸದಾಗಿ ರಚಿಸಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ *ಹಾಗೂ ಸಾಂಸ್ಕೃತಿಕ ಸಂಘದ ಚಟುವಟಿಕೆಗಳಿಗೆ ಮುಂದಿನ ವರ್ಷಗಳಲ್ಲಿ 500 ಕೋಟಿ ರೂ.

*ಪಂಚಾಯತ್ ಸಂಸ್ಥೆಗಳ ವಿಕೇಂದ್ರೀಕರಣ ಮತ್ತು ಬಲವರ್ಧನೆಗೆ ಪಂಚಾಯತ್‍ರಾಜ್ ಆಯುಕ್ತಾಲಯ ಪ್ರಾರಂಭ.

Advertisement

*ಗ್ರಾಮೀಣ ಸುಮಾರ್ಗ ಯೋಜನೆ” ಯಡಿ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ 780 ಕೋಟಿ ರೂ. ಅನುದಾನ.

*ಜಲಧಾರೆ” ಯೋಜನೆಯಡಿಯಲ್ಲಿ Asian Infrastructure Investment Bank (AIIB) ನೆರವಿನೊಂದಿಗೆ 700 ಕೋಟಿ ರೂ. ವೆಚ್ಚದಲ್ಲಿ ವಿಜಯಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬೃಹತ್ ಕುಡಿಯುವ ನೀರಿನ ಯೋಜನೆ ಜಾರಿ.

*ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಮತ್ತು ರಾಜ್ಯದ ಸಂಪನ್ಮೂಲ ಬಳಸಿಕೊಂಡು ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು “ಮನೆ ಮನೆಗೆ ಗಂಗೆ” ನೂತನ ಯೋಜನೆ ಜಾರಿ.

*ಗ್ರಾಮೀಣ ಮತ್ತು ನಗರ ಪ್ರದೇಶಗಳ ನೀರು ಪೂರೈಕೆ ಸಮನ್ವಯಕ್ಕೆ ಸಮಗ್ರ ನೀತಿ ಜಾರಿ. ಒಂದೇ ಸಚಿವಾಲಯದಡಿ ಸಂಬಂಧಿಸಿದ ಇಲಾಖೆ ಮತ್ತು ಸಂಸ್ಥೆಗಳ ಸೇರ್ಪಡೆ.

*ರಾಜ್ಯದ 17 ನದಿ ಪಾತ್ರದ ಮಲಿನತೆಯನ್ನು ತಡೆಗಟ್ಟಲು 1690 ಕೋಟಿ ರೂ. ಮೊತ್ತದಲ್ಲಿ 20 ನಗರ ಪ್ರದೇಶಗಳ ಒಳಚರಂಡಿ ವ್ಯವಸ್ಥೆ ಹಾಗೂ ಒಂದು ಪಟ್ಟಣಕ್ಕೆ ಮಲತ್ಯಾಜ್ಯ ಸಂಸ್ಕರಣಾ ಘಟಕ(Faecal Sludge and Septage Management) ಅಳವಡಿಕೆಗೆ ಕ್ರಮ, 100 ಕೋಟಿ ರೂ. ಅನುದಾನ

*ಬಳ್ಳಾರಿ, ಚಿತ್ರದುರ್ಗ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಶುದ್ಧೀಕರಿಸಿದ ನೀರನ್ನು ಗೃಹೇತರ ಉದ್ದೇಶದ ಮರುಬಳಕೆಗೆ 20 ಕೋಟಿ ರೂ. ವೆಚ್ಚದ ಯೋಜನೆ.

*ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕಾರ್ಯಕ್ರಮ ಜಾರಿ.

*ಕರ್ನಾಟಕ ನಗರ ವೀಕ್ಷಣಾಲಯದ (KARNATAKA URBAN OBSERVATORY) ಸ್ಥಾಪನೆಗೆ ಕ್ರಮ.

*ರಾಜ್ಯದಲ್ಲಿ ಹೂಡಿಕೆದಾರರಿಗೆ ಉತ್ತೇಜನ ನೀಡಲು, ಕೈಗಾರಿಕೆ ಸ್ಥಾಪನೆಗೆ ಗುರುತಿಸುವ ಜಾಗದಲ್ಲಿ ನೇರವಾಗಿ ಭೂಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿಗೆ ಕ್ರಮ.

*2020ರ ನವೆಂಬರ್‍ನಲ್ಲಿ “ಇನ್‍ವೆಸ್ಟ್ ಕರ್ನಾಟಕ-2020” ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜನೆ.

*“ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ” ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ “ಹೆಲ್ತ್ ಅಂಡ್ ವೆಲ್‍ನೆಸ್ ಕ್ಲಸ್ಟರ್” ಮತ್ತು ಧಾರವಾಡ ಜಿಲ್ಲೆಯಲ್ಲಿ “ಹೋಮ್ ಅಂಡ್ ಪರ್ಸನಲ್ ಕೇರ್ ಕನ್ಸ್ಯೂಮರ್ ಗೂಡ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್” ಸ್ಥಾಪನೆ.

*ರಾಮನಗರ ತಾಲ್ಲೂಕಿನ ಹಾರೋಹಳ್ಳಿ 5ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ “ಎಲೆಕ್ಟ್ರಿಕ್ ವೆಹಿಕಲ್ಸ್ ಮತ್ತು ಎನರ್ಜಿ ಸ್ಟೋರೇಜ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್” ಸ್ಥಾಪನೆಗೆ 10 ಕೋಟಿ ರೂ. ಅನುದಾನ.

*ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು-ಮುದ್ದೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ “ಡಿಫೆನ್ಸ್ ಅಂಡ್ ಏರೋಸ್ಪೇಸ್ ಎಕ್ಯುಪ್‍ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್” ಸ್ಥಾಪನೆ.

*ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆ.

*ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕೈಗಾರಿಕೆಗಳ ಸಹಯೋಗದೊಂದಿಗೆ “Centre for Smart Manufacturing” ಸ್ಥಾಪನೆಗೆ ಐದು ಕೋಟಿ ರೂ. ಅನುದಾನ.

*ನಾರು ಆಧಾರಿತ ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಮತ್ತು ವ್ಯಾಪಕ ಮಾರುಕಟ್ಟೆ ಒದಗಿಸಲು ಐದು ಕೋಟಿ ರೂ.ಗಳ ವೆಚ್ಚದಲ್ಲಿ “Coir Experience Centre”  ಸ್ಥಾಪನೆ.

*ತಿಪಟೂರಿನಲ್ಲಿ ‘ತೆಂಗು ಆಧಾರಿತ ಕೈಗಾರಿಕಾ ಪಾರ್ಕ್’ ಅಭಿವೃದ್ಧಿ.

*ಕೇಂದ್ರ ಸರ್ಕಾರದ “ಪವರ್‍ಟೆಕ್ಸ್ ಇಂಡಿಯಾದ ನೂಲು ನಿಧಿ ಯೋಜನೆ”ಯಡಿ ಕೇಂದ್ರ ಸರ್ಕಾರದ ವಂತಿಗೆ ಹಾಗೂ ರಾಜ್ಯ ಸರ್ಕಾರದ ಗರಿಷ್ಠ 50 ಲಕ್ಷ ರೂ. ಸಹಾಯಧನದೊಂದಿಗೆ ಎರಡು ಕೇಂದ್ರಗಳಲ್ಲಿ ನೂಲಿನ ಘಟಕ ಸ್ಥಾಪನೆ.

*ಹೊಸ ಜವಳಿ ಮತ್ತು ಸಿದ್ಧ ಉಡುಪು ನೀತಿಯ ಪ್ರೋತ್ಸಾಹಕಗಳಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರ್ಪಡೆ.

*ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮತ್ತು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನೂತನ ಜವಳಿ ಪಾರ್ಕ್ ಪ್ರಾರಂಭ; 3000 ಉದ್ಯೋಗ ಸೃಷ್ಟಿ.
*ರಾಜ್ಯದ ಜಿ.ಐ. ಟ್ಯಾಗ್ ಹೊಂದಿರುವ ಕೈಮಗ್ಗ ಬಟ್ಟೆ ಉತ್ಪನ್ನಗಳಿಗೆ ರಾಜ್ಯದ ಪ್ರತಿಷ್ಠಿತ “ಪ್ರಿಯದರ್ಶಿನಿ” ಬ್ರಾಂಡ್ ಮೂಲಕ ಮಾರುಕಟ್ಟೆ ಸೌಲಭ್ಯ.

*ನೇಕಾರರ ಸಾಲ ಮನ್ನಾ ಯೋಜನೆ ಪೂರ್ಣಗೊಳಿಸಲು 79.57 ಕೋಟಿ ರೂ. ಅನುದಾನ.

*ಹಿಂದುಳಿದ ಪ್ರದೇಶಗಳು ಮತ್ತು ಟಯರ್-2 ಹಾಗೂ ಟಯರ್-3ರ ನಗರಗಳಿಗೆ ಬಂಡವಾಳ ಆಕರ್ಷಿಸುವ ನೂತನ ಕೈಗಾರಿಕಾ ನೀತಿ ಜಾರಿ. ಉದ್ಯೋಗ ಸೃಷ್ಟಿಗೆ ಆದ್ಯತೆ.

*ರಾಜ್ಯದ ವ್ಯಾಪ್ತಿಯಲ್ಲಿ ಅಮೂಲ್ಯ ಖನಿಜಗಳ (High Value Minerals) ನಿಕ್ಷೇಪಗಳನ್ನು ಗುರುತಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕೇಂದ್ರ ಕಛೇರಿಯಲ್ಲಿ ಖನಿಜಾನ್ವೇಷಣೆ ವಿಭಾಗ ಸ್ಥಾಪನೆ.

*KIADB  ಹಾಗೂ KSSIDC ಸಂಸ್ಥೆಗಳ ಮುಖ್ಯ ಸೇವೆಗಳು “ಸಕಾಲ”ದ ವ್ಯಾಪ್ತಿಗೆ ಸೇರ್ಪಡೆ.

*ಕಿತ್ತೂರು ಮೂಲಕ ಧಾರವಾಡ-ಬೆಳಗಾವಿ ರೈಲು ಮಾರ್ಗ ಯೋಜನೆಗೆ ಉಚಿತವಾಗಿ ಭೂಮಿ ನೀಡಲು ಹಾಗೂ ಶೇ. 50 ರಷ್ಟು ಕಾಮಗಾರಿ ವೆಚ್ಚ ಭರಿಸಲು ರಾಜ್ಯ ಸರ್ಕಾರದ ಒಪ್ಪಿಗೆ.

*ಹಾಸನ-ಮಂಗಳೂರು ರೈಲ್ ಡೆವಲಪ್‍ಮೆಂಟ್ ಕಾರ್ಪೋರೇಷನ್‍ನಿಂದ ಸಕಲೇಶಪುರ, ಸುಬ್ರಮಣ್ಯ ನಿಲ್ದಾಣಗಳ ನಡುವಿನ ಘಾಟಿ ಪ್ರದೇಶದ ರೈಲು ಮಾರ್ಗದ ಕ್ಷಮತೆ ಹೆಚ್ಚಳಕ್ಕೆ ಕ್ರಮ.

*ಬೆಂಗಳೂರಿನ ಆನಂದರಾವ್ ವೃತ್ತದಲ್ಲಿ 400 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಕಚೇರಿಗಳಿಗಾಗಿ 25 ಅಂತಸ್ತುಗಳ ಬಹುಮಹಡಿಯ “ಅವಳಿ ಗೋಪುರ” ನಿರ್ಮಾಣ-ಯೋಜನಾ ವರದಿ ತಯಾರಿಕೆಗೆ ಕ್ರಮ.

*ಎಲ್ಲಾ ಇಲಾಖೆಗಳಿಗೆ ಹಾಗೂ ನಿಗಮ-ಮಂಡಳಿಗಳಿಗೆ ವಿವಿಧ ಕಾಮಗಾರಿಗಳಿಗೆ ಏಕರೂಪ ಅನುಸೂಚಿ ದರಗಳನ್ನು ರೂಪಿಸಲು ಕ್ರಮ.

*ಖಾಸಗಿ ಸಹಭಾಗಿತ್ವದಲ್ಲಿ 2500 ಕೋಟಿ ರೂ.ಗಳ ವೆಚ್ಚದಲ್ಲಿ ಉತ್ತರ ಕನ್ನಡ ಜಿಲ್ಲೆ ಪಾವಿನಕುರ್ವೆ/ ಬೇಲೆಕೇರಿ ಬಂದರು ಅಭಿವೃದ್ಧಿಗೆ ಬಿಡ್ ಆಹ್ವಾನ.

*ರಾಜ್ಯದ ಕಿರು ಬಂದರುಗಳ ಅಭಿವೃದ್ಧಿ, ಕರಾವಳಿ ಸಂರಕ್ಷಣೆ ಮತ್ತು ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ರೂಪಿಸಲಾಗಿರುವ ಕರ್ನಾಟಕ ಜಲಸಾರಿಗೆಯ ಸಮಗ್ರ ಯೋಜನೆ ಜಾರಿ.

*ಕೇಂದ್ರ ಸರ್ಕಾರದ ಭಾರತೀಯ ಒಳನಾಡು ಜಲಸಾರಿಗೆ ಪ್ರಾಧಿಕಾರ (Inland Waterways Authority of India)  ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದ ಜಲಸಾರಿಗೆ ನದಿಗಳಾದ ಕಾಳಿ, ಶರಾವತಿ, ಹಂಗಾರಕಟ್ಟೆ, ಗುರುಪುರ ಮತ್ತು ನೇತ್ರಾವತಿ ಜಲಸಾರಿಗೆ ಮಾರ್ಗಗಳು ಹಾಗೂ ದ್ವೀಪಗಳ ಅಭಿವೃದ್ಧಿ.

*ರಾಜ್ಯದ ಎಲ್ಲಾ ನಾವೀನ್ಯತಾ ಚಟುವಟಿಕೆಗಳನ್ನು ಕ್ರೋಢೀಕರಿಸಿ ಸಂಯೋಜಿಸಲು ನಾಲ್ಕು ಕೋಟಿ ರೂ. ವೆಚ್ಚದಲ್ಲಿ “ಇನ್ನೋವೇಷನ್ ಹಬ್”(Innovation Hub) ಸ್ಥಾಪನೆ.

*STPI ಸಂಸ್ಥೆಯ ಸಹಭಾಗಿತ್ವದೊಂದಿಗೆ 30 ಕೋಟಿ ರೂ. ವೆಚ್ಚದಲ್ಲಿ Efficiency Augmentation ಕುರಿತು ಉತ್ಕøಷ್ಟತಾ ಕೇಂದ್ರ ಸ್ಥಾಪನೆ.

*ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ “Artificial Intelligence Research Translation Park” ಸ್ಥಾಪನೆಗೆ ಕ್ರಮ. ಮುಂದಿನ ಮೂರು ವರ್ಷಗಳಲ್ಲಿ 60 ಕೋಟಿ ರೂ.ಗಳ ಇಡಿಗಂಟು ಅನುದಾನ

*ಬೆಂಗಳೂರು ಬಯೋ ಇನ್ನೋವೇಷನ್ ಕೇಂದ್ರದ ಆಶ್ರಯದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ “ಕೃಷಿ ನಾವೀನ್ಯತಾ ಕೇಂದ್ರ” ಸ್ಥಾಪನೆ.

*ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹಾಗೂ ವಿದೇಶಿ ಸರ್ಕಾರ ಮತ್ತು ಕಂಪನಿಗಳೊಂದಿಗೆ ಸಂಬಂಧಗಳನ್ನು ಬಲಪಡಿಸಲು ಏಳು ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ತಂತ್ರಜ್ಞಾನ ಮಿಷನ್ ಸ್ಥಾಪನೆ.

*ಮುಂದಿನ ಎರಡು ವರ್ಷಗಳಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಎರಡು ಕೋಟಿ ರೂ. ವೆಚ್ಚದಲ್ಲಿ ಸಾವಿರ ಪದವೀಧರರಿಗೆ Talent Acceleration Programme ಅನುಷ್ಠಾನ

*2025ರ ವೇಳೆಗೆ ಭಾರತದ ಜೈವಿಕ ಆರ್ಥಿಕತೆಗೆ ಕರ್ನಾಟಕದ ಕೊಡುಗೆಯನ್ನು ಶೇ. 50 ಕ್ಕೆ ಹೆಚ್ಚಿಸಲು ಮಾರ್ಗಸೂಚಿ ಮತ್ತು ಕಾರ್ಯತಂತ್ರವನ್ನು ರೂಪಿಸಲು ಕ್ರಮ.

*ದಾವೋಸ್‍ನ ವಿಶ್ವ ಆರ್ಥಿಕ ವೇದಿಕೆಯ ಸಹಭಾಗಿತ್ವದೊಂದಿಗೆ ‘Internet of Ethical Things’ ವಿಷಯದಲ್ಲಿ ಉತ್ಕøಷ್ಟತಾ ಕೇಂದ್ರ ಸ್ಥಾಪನೆ. 2020-21ರಲ್ಲಿ 7.5 ಕೋಟಿ ರೂ. ಅನುದಾನ.

*ನವೋದ್ಯಮಗಳ ವೇಗ ವರ್ಧಿಸಲು ಹಾಗೂ ಮಾರುಕಟ್ಟೆ ಪ್ರವೇಶಕ್ಕೆ ನೆರವಾಗಲು ಉದ್ಯಮದವರ ಸಹಯೋಗದೊಂದಿಗೆ ‘Acceleration Programme’ ಪ್ರಾರಂಭಿಸಲು ಮೂರು ಕೋಟಿ ರೂ. ಅನುದಾನ.

*ಹನ್ನೊಂದು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸಂಚಾರಿ ಡಿಜಿಟಲ್ ತಾರಾಲಯ’ ಐದು ಕೋಟಿ ರೂ. ವೆಚ್ಚದಲ್ಲಿ ಇತರ ಐದು ಜಿಲ್ಲೆಗಳಿಗೆ ವಿಸ್ತರಣೆ.

*ಪದವಿ ಪೂರ್ವ ವಿದ್ಯಾರ್ಥಿಗಳಿಗೆ ‘ವಿಜ್ಞಾನ ಪ್ರತಿಭಾ ಶೋಧನೆ’ ಕಾರ್ಯಕ್ರಮ ಪ್ರಾರಂಭ. ಆಯ್ಕೆಯಾದ 500 ವಿದ್ಯಾರ್ಥಿಗಳಿಗೆ ಎರಡು ವರ್ಷ ಶಿಕ್ಷಣ, ಒಂದು ಸಾವಿರ ರೂ. ಮಾಸಿಕ ಶಿಷ್ಯವೇತನ.

*ಗ್ರಾಮೀಣ ಯುವಕ/ಯುವತಿಯರಿಗೆ ಕೌಶಲ್ಯಾಭಿವೃದ್ಧಿಗಾಗಿ 20 ಕೋಟಿ ರೂ. ವೆಚ್ಚದಲ್ಲಿ ವಸತಿ ತರಬೇತಿ ಕಾರ್ಯಕ್ರಮ.

*ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಶಿವಮೊಗ್ಗ, ಹಾಸನ, ತುಮಕೂರು ಮತ್ತು ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ 353 ಕೋಟಿ ರೂ. ವೆಚ್ಚದಲ್ಲಿ ಉತ್ಕøಷ್ಟತಾ *ಕೇಂದ್ರಗಳ ಸ್ಥಾಪನೆ. ಮುಂದಿನ ಐದು ವರ್ಷಗಳಲ್ಲಿ 12,600 ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ.

*ರಾಜ್ಯದ ಐ.ಟಿ.ಐ.ಗಳಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಸಂಸ್ಥೆಗಳ ಸಹಯೋಗದೊಂದಿಗೆ ಉಭಯ ತರಬೇತಿ ವ್ಯವಸ್ಥೆ(Dual System of Training) ಅಳವಡಿಕೆ.

*ಇಸ್ರೋ, ಹೆಚ್.ಎ.ಎಲ್. ಇತ್ಯಾದಿ ಪ್ರತಿಷ್ಠಿತ ಸಂಸ್ಥೆಗಳಿಗೆ ಅಗತ್ಯವಿರುವ ಬಿಡಿಭಾಗ ಉತ್ಪಾದನೆಗೆ ಅನುವಾಗುವಂತೆ ಬೆಂಗಳೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿನ ಸೇವಾ ಕೇಂದ್ರಗಳ ಸಾಮಥ್ರ್ಯ ವೃದ್ಧಿಗೆ 20 ಕೋಟಿ ರೂ.

*ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿಯಲ್ಲಿ ರಾಜ್ಯದ ನಗರಗಳ ಬೀದಿ ವ್ಯಾಪಾರಿಗಳಿಗೆ ಇ-ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಲು ತಂತ್ರಾಂಶ ಅಭಿವೃದ್ಧಿ.

*ವಾಯು ಮಾಲಿನ್ಯ ಕಡಿಮೆಗೊಳಿಸಲು ರಾಯಚೂರು, ಬಳ್ಳಾರಿ ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿ ‘ಫ್ಲೂ ಗ್ಯಾಸ್ ಡಿಸಲ್ಫರೈಸೇಷನ್’ (FGD) 2510 ಕೋಟಿ ರೂ. ವೆಚ್ಚದಲ್ಲಿ ವ್ಯವಸ್ಥೆ ಸ್ಥಾಪಿಸಲು ಕ್ರಮ.

*ಸಣ್ಣ ಮತ್ತು ಮಧ್ಯಮ ಕಾಫಿ ಮತ್ತು ಟೀ ಬೆಳೆಗಾರರ 10 HP ವರೆಗಿನ ಪಂಪ್ ಸೆಟ್‍ಗಳ ವಿದ್ಯುತ್ ಶುಲ್ಕ ಮರುಪಾವತಿಗೆ ಕ್ರಮ.

*ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ ವಲಯಕ್ಕೆ ಒದಗಿಸಲಾದ ಅನುದಾನ- 55,732 ಕೋಟಿ ರೂ.

Advertisement

Udayavani is now on Telegram. Click here to join our channel and stay updated with the latest news.

Next