Advertisement
ಈ ಬಜೆಟ್ ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ ಎನ್ನುವುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ
Related Articles
Advertisement
* ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಯ ಎಲ್ಲ ಕಛೇರಿಗಳನ್ನು ಒಂದೇ ಸೂರಿನಡಿ ತರಲು, 150 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಭವನ ನಿರ್ಮಾಣ.
ಇದನ್ನೂ ಓದಿ:ಬಜೆಟ್;ತ್ರಾಸಿ, ಸೋಮೇಶ್ವರ ಸೇರಿ ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿ, ಮತ್ಸ್ಯದರ್ಶಿನಿ ಸ್ಥಾಪನೆ
*ರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ.
* ಸಿಂಗೇನ ಅಗ್ರಹಾರ ಸಮೀಪದ ಗುಳಿಮಂಗಳ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ.
* ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ.
* ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿ
* ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ “ಆಧುನಿಕ ಗುಣವಿಶ್ಲೇಷಣಾ ಘಟಕ”ಸ್ಥಾಪನೆ.
* ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರು ತುಂಬಿಸುವ 500 ಕೋಟಿ ರೂ. ವೆಚ್ಚದ ಯೋಜನೆ ಅನುಷ್ಠಾನ.
ಇದನ್ನೂ ಓದಿ: ಬೃಹ್ಮನಿಗೂ ಏನು ಮಾಡಲಾಗದ ಸಂದರ್ಭದಲ್ಲಿ ಬಿಎಸ್ ವೈ ಒಳ್ಳೆಯ ಬಜೆಟ್ ನೀಡಿದ್ದಾರೆ: ಅಶೋಕ್
* ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ನದಿಗಳಲ್ಲಿ ಪ್ರವಾಹ ಮತ್ತು ಭಾರಿ ಅಲೆಗಳಿಂದಾಗಿ ಉಪ್ಪುನೀರು ಹಿಮ್ಮುಖವಾಗಿ ನುಗ್ಗುವುದನ್ನು ಫ್ಲಾಪ್ ಗೇಟ್ ಮುಖಾಂತರ ತಡೆಗಟ್ಟುವ ಖಾರ್ಲ್ಯಾಂಡ್ ಯೋಜನೆ ಜಾರಿ.
*ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ.
* ಬೆಂಗಳೂರು, ಮೈಸೂರು, ಬಳ್ಳಾರಿ ಮತ್ತು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಒಟ್ಟು ಐದು ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ವಿಭಾಗ ಪ್ರಾರಂಭ. ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಕೇಂದ್ರ ಪ್ರಾರಂಭ.
* ಶಿವಮೊಗ್ಗ ಮತ್ತು ಮೈಸೂರಿನಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ.
*ದಾವಣಗೆರೆಯಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ 50 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪಕೇಂದ್ರ ಪ್ರಾರಂಭಿಸಲು ಕ್ರಮ.
ಇದನ್ನೂ ಓದಿ: ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ, ಕುರಿ, ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ ಘೋಷಣೆ
* ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಟ್ಟಗಾಯಗಳ ಚಿಕಿತ್ಸಾ ಕೇಂದ್ರ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗ ಪ್ರಾರಂಭ.
* ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ.
* ಹಾಸನ ಮತ್ತು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ.
* ಧಾರವಾಡದ ಡಿಮ್ಹಾನ್ಸ್ ಸಂಸ್ಥೆಯನ್ನು 75 ಕೋಟಿ ರೂ.ಗಳ ವೆಚ್ಚದಲ್ಲಿ ಮಾನಸಿಕ ನರರೋಗಿಗಳ ಸುಸಜ್ಜಿತ ಚಿಕಿತ್ಸಾ ಸಂಸ್ಥೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೇಗೇರಿಸಲು ಕ್ರಮ. ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ನಿಗದಿ.
* ನಿಪ್ಪಾಣಿಯಲ್ಲಿ “ಕೊಲ್ಹಾಪುರಿ ಪಾದರಕ್ಷೆಗಳ ಕ್ಲಸ್ಟರ್’ ಮತ್ತು ಚಿತ್ರದುರ್ಗದಲ್ಲಿ ಪಾದರಕ್ಷಾ ತರಬೇತಿ ಸಂಸ್ಥೆಯ ವಿಸ್ತರಣಾ ಕೇಂದ್ರ ಪ್ರಾರಂಭ
*ಶ್ರವಣಬೆಳಗೊಳ ಮತ್ತು ಇನ್ನಿತರೆ ಜೈನ ಪುಣ್ಯ ಕ್ಷೇತ್ರಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ;
* ಬೆಳಗಾವಿ ನಗರದಲ್ಲಿ ವರ್ತುಲ ರಸ್ತೆ ನಿರ್ಮಾಣ; ರಾಜ್ಯ ಸರ್ಕಾರದಿಂದ ಭೂಸ್ವಾಧೀನ ವೆಚ್ಚದ ಶೇ 50ರಷ್ಟು ಮೊತ್ತ 140 ಕೋಟಿ ರೂ. ಒದಗಿಸಲು ಕ್ರಮ. ರಾಯಚೂರು ನಗರಕ್ಕೆ ವರ್ತುಲ ರಸ್ತೆ ನಿರ್ಮಾಣ
*ಧಾರವಾಡ -ಕಿತ್ತೂರು-ಬೆಳಗಾವಿಯ ನಡುವೆ 73 ಕಿ.ಮೀ. ಉದ್ದದ ಹೊಸ ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರದಿಂದ 463 ಕೋಟಿ ರೂ. ಅನುದಾನ.
ಇದನ್ನೂ ಓದಿ: ನಿರ್ದಿಷ್ಟ ಗುರಿ- ಕಾರಣ ಇಲ್ಲದ, ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್: ಪರಮೇಶ್ವರ್ ಟೀಕೆ
* ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ನೌಕಾ ವಾಯುನೆಲೆ ಸಮೀಪದಲ್ಲಿ ಸಿವಿಲ್ ಎನ್ಕ್ಲೇವ್ ಅಭಿವೃದ್ಧಿಪಡಿಸಲು ಕ್ರಮ. 175 ಕೋಟಿ ರೂ. ವೆಚ್ಚದಲ್ಲಿ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭಿಸಲು ಕ್ರಮ . 394 ಕೋಟಿ ವೆಚ್ಚದ ಶಿವಮೊಗ್ಗ ಮತ್ತು 220 ಕೋಟಿ ರೂ. ವೆಚ್ಚದ ವಿಜಯಪುರ ವಿಮಾನ ನಿಲ್ದಾಣಗಳ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಲು ಕ್ರಮ.
* ತದಡಿಯಲ್ಲಿ 1000 ಎಕರೆಗಳ ಪರಿಸರ ಪ್ರವಾಸೋದ್ಯಮ ಉದ್ಯಾನವನ ಅಭಿವೃದ್ಧಿ.
* ಹೊನ್ನಾವರದ ಕಾಸರಕೋಡ ಬಂದರು ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ-66 ರಿಂದ ಭಾರತಮಾಲಾ ಯೋಜನೆಯಡಿ 100 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಚತುಷ್ಪಥ ಸಂಪರ್ಕ ರಸ್ತೆ ನಿರ್ಮಿಸಲು ಕ್ರಮ
* ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ 1,478 ಕೋಟಿ ರೂ. ವೆಚ್ಚದಲ್ಲಿ“ಬಲ್ಕ್ ಡ್ರಗ್ ಪಾರ್ಕ್” ಅಭಿವೃದ್ಧಿ. ಬೀದರ್ನ ಕೃಷಿ ಉಪಕರಣಗಳ ತಯಾರಿಕಾ ಕ್ಲಸ್ಟರ್ನಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್ ಘೋಷಣೆ.
* ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆ; ಉತ್ತರ ಕರ್ನಾಟಕದ ಭಾಗದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ “ಸ್ಮಾರ್ಟ್ ಹ್ಯಾಂಡ್ಲೂಮ್ ಡಿಸೈನ್ ಸ್ಟುಡಿಯೋ” ಸ್ಥಾಪನೆ.
* ಕಲಬುರಗಿ ಜಿಲ್ಲೆಯ ಫಿರೋಜಾಬಾದ್ನಲ್ಲಿ 500 ಮೆಗಾ ವ್ಯಾಟ್ ಸಾಮರ್ಥ್ಯದ ಸೌರಶಕ್ತಿ ಪಾರ್ಕ್ ಸ್ಥಾಪನೆ
* ಶಿರಸಿಯಲ್ಲಿ ಏಳು ಕೋಟಿ ರೂ .ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆ. 2021-22 ರಲ್ಲಿ ಎರಡು ಕೋಟಿ ರೂ. ಅನುದಾನ.
* ಬೆಂಗಳೂರಿನ ಮಲ್ಲೇಶ್ವರದಲ್ಲಿ ಮೈಸೂರು ಲ್ಯಾಂಪ್ಸ್ ವರ್ಕ್ಸ್ ನಿಯಮಿತಕ್ಕೆ ಸೇರಿದ ಪ್ರದೇಶದಲ್ಲಿ ಎಕ್ಸ್ ಪೀರಿಯನ್ಸ್ ಬೆಂಗಳೂರು ಅಭಿವೃದ್ಧಿ.
* ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ.
* ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ.
*ಕಿತ್ತೂರಿನ ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಪ್ರವಾಸಿ ಸೌಲಭ್ಯಗಳಿಗಾಗಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ
* ಬಸವಕಲ್ಯಾಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಹೊಸ ಅನುಭವ ಮಂಟಪ ನಿರ್ಮಿಸುವ ಯೋಜನೆಗೆ 200 ಕೋಟಿ ರೂ. ಬಿಡುಗಡೆ; ಕಾಮಗಾರಿ ಶೀಘ್ರ ಪ್ರಾರಂಭ.
* ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ಗ್ರಾಮದ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ.
* ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಸ್ಥಾಪಿಸಲಾಗುತ್ತಿರುವ “ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರ”ಕ್ಕೆ ಸರ್ಕಾರದಿಂದ 10 ಕೋಟಿ ರೂ. ಸಹಾಯಾನುದಾನ
* 10 ಕೋಟಿ ರೂ . ವೆಚ್ಚದಲ್ಲಿ ಮಂಡ್ಯ ನಗರದ ಕ್ರೀಡಾಂಗಣದ ಉನ್ನತೀಕರಣ.
ಇದನ್ನೂ ಓದಿ: ದಿಕ್ಕು ದೆಸೆ ಇಲ್ಲದ ಬಜೆಟ್: ಬಂಡೆಪ್ಪ ಕಾಶಂಪೂರ್ ಟೀಕೆ
* ಮೈಸೂರು ಜಿಲ್ಲೆಯ ಕಬಿನಿ ಆಣೆಕಟ್ಟಿನ ಕೆಳಭಾಗದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ.
* ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮ ಮತ್ತು ಚಿಕ್ಕಮಗಳೂರು ಜಿಲ್ಲೆ ಕೆಮ್ಮಣ್ಣುಗುಂಡಿ ಗಿರಿಧಾಮಗಳ ನಿರ್ವಹಣೆ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ.
*ಚಾಮರಾಜನಗರ ಜಿಲ್ಲೆಯ ಗೋಪಿನಾಥಂ ಪ್ರದೇಶದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ವನ್ಯ ಸಫಾರಿಯನ್ನೊಳಗೊಂಡಂತೆ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ.
* ಕೊಡಗು ಮತ್ತು ಹಾವೇರಿ ಜಿಲ್ಲೆಯಲ್ಲಿ ನೂತನ ಜಿಲ್ಲಾ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ ತಲಾ ಎಂಟು ಕೋಟಿ ರೂ . ಹಂಚಿಕೆ.
* ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರ ಪ್ರಾರಂಭ.