Advertisement

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

11:09 PM Oct 23, 2021 | Team Udayavani |

ಹಾನಗಲ್‌: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿರುವುದರಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ.

Advertisement

ಎರಡೂ ಕ್ಷೇತ್ರಗಳಲ್ಲಿ ತಲಾ ಎರಡೆರಡು ದಿನ ಪ್ರಚಾರ ನಡೆಸಿರುವ ಯಡಿಯೂರಪ್ಪ ಅವರು ಬಿಜೆಪಿಯ ಗೆಲುವಿನ ಭರವಸೆಯನ್ನು ಹೆಚ್ಚಿಸುತ್ತಿದ್ದಾರೆ. ಇವರು ಇನ್ನಷ್ಟು ದಿನ ಪ್ರಚಾರ ನಡೆಸಬೇಕೆಂಬ ಬೇಡಿಕೆ ಹೆಚ್ಚಾಗಿದೆ.

ಶನಿವಾರ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಜಂಟಿಯಾಗಿ ಹಾನಗಲ್‌ ವಿಧಾನಸಭಾ ಕ್ಷೇತ್ರದ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದು, ಕ್ಷೇತ್ರಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರ ಮಾಡಲಿರುವ ಯೋಜನೆಗಳ ಪಟ್ಟಿಯನ್ನು ಬಿಚ್ಚಿಟ್ಟಿರುವುದು ಮತದಾರರ ಮನ ಸೆಳೆಯಲು ಅನುಕೂಲವಾಗುತ್ತದೆ ಎಂಬ ವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದಾರೆ.

ಕಡಿಮೆಯಾಗದ ಯಡಿಯೂರಪ್ಪ ಜನಪ್ರಿಯತೆ:
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರದಲ್ಲಿ ಇಲ್ಲದಿದ್ದರೂ, ಅವರ ಬಗ್ಗೆ ಜನರಿಗೆ ಅಭಿಮಾನ ಮತ್ತು ಪ್ರೀತಿ ಕಡಿಮೆಯಾಗಿಲ್ಲ. ಪ್ರಚಾರ ಸಂದರ್ಭದಲ್ಲಿ ಅವರು ಪಾಲ್ಗೊಳ್ಳುವ ಎಲ್ಲ ಸಭೆಗಳಲ್ಲಿಯೂ ಜನರು ಉತ್ಸಾಹದಿಂದ ಪಾಲ್ಗೊಂಡಿದ್ದು, ಅವರ ಭಾಷಣಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ಅಲ್ಲದೇ ಅವರ ಹೆಸರು ಹೇಳಿದಾಗಲೂ ಜೈಕಾರ ಹಾಕಿ, ಅವರಿಗೆ ತಮ್ಮ ಬೆಂಬಲ ವ್ಯಕ್ತಪಡಿಸುವ ದೃಶ್ಯ ಸಾಮಾನ್ಯವಾಗಿತ್ತು.

ಇದನ್ನೂ ಓದಿ:ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

Advertisement

ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ರಮೇಶ ಬೂಸನೂರು ಪರ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಬಾಲಕನೋರ್ವ ಯಡಿಯೂರಪ್ಪ ಅವರ ಆರೋಗ್ಯ ವಿಚಾರಿಸಿರುವುದು ಅವರ ಜನಪ್ರಿಯತೆ ಇನ್ನೂ ಇದೆ ಎನ್ನುವುದನ್ನು ಸೂಚಿಸುವಂತಿದೆ.

ಇನ್ನೆರಡು ದಿನ ಪ್ರಚಾರಕ್ಕೆ ಬೇಡಿಕೆ
ಬಿ.ಎಸ್‌.ಯಡಿಯೂರಪ್ಪ ಎರಡೂ ಕ್ಷೇತ್ರಗಳಲ್ಲಿ ತಲಾ ಎರಡು ದಿನ ಪ್ರಚಾರ ನಡೆಸಿದ್ದು, ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಮತ್ತಷ್ಟು ಹೆಚ್ಚಾಗಿರುವುದರಿಂದ ಇನ್ನೆರಡು ದಿನ ತಮ್ಮ ಕ್ಷೇತ್ರಗಳಲ್ಲಿ ಇನ್ನೆರಡು ದಿನ ಪ್ರಚಾರ ನಡೆಸುವಂತೆ ಅಭ್ಯರ್ಥಿಗಳು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡಿದ್ದಾರಂತೆ. ಗುಪ್ತಚರ ಇಲಾಖೆಯ ಮಾಹಿತಿಯೂ ಯಡಿಯೂರಪ್ಪ ಅವರ ಪ್ರಚಾರದಿಂದ ಬಿಜೆಪಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂಬ ವರದಿ ನೀಡಿದೆಯಂತೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಎರಡೂ ಕ್ಷೇತ್ರದಲ್ಲಿ ಬಿಡುವಿಲ್ಲದೆ ಪ್ರಚಾರ ನಡೆಸುತ್ತಿದ್ದು, ತಮ್ಮೊಂದಿಗೆ ಮಾಜಿ ಸಿಎಂ ಯಡಿಯೂರಪ್ಪ ಅವರೂ ಸೇರಿಕೊಂಡಿದ್ದಕ್ಕೆ ಅವರ ಉತ್ಸಾಹವೂ ಹೆಚ್ಚಾಗುವಂತೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next