Advertisement

ಬಿಎಸ್‌ವೈ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಚಲಮೇಶ್ವರ್‌

06:00 AM Feb 06, 2018 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್‌ ಪ್ರಕರಣದ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಚಲಮೇಶ್ವರ್‌ ಹಿಂದೆ ಸರಿದಿದ್ದಾರೆ.

Advertisement

ಯಡಿಯೂರಪ್ಪ ವಿರುದ್ಧದ 15 ಡಿನೋಟಿಫಿಕೇಷನ್‌ ಪ್ರಕರಣಗಳನ್ನು ರದ್ದುಗೊಳಿಸಿದ್ದ ರಾಜ್ಯ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಅರ್ಜಿದಾರ ಸಿರಾಜಿನ್‌ ಪಾಷಾ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿ ನ್ಯಾ.ಚಲಮೇಶ್ವರ್‌ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ, ಸೋಮವಾರ ಅರ್ಜಿ ವಿಚಾರಣೆಗೆ ಬಂದ ವೇಳೆ ನ್ಯಾ.ಚಲಮೇಶ್ವರ್‌ ಅವರು ತಾವು ಅರ್ಜಿ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ಹೇಳಿದರು.

ಇದರಿಂದಾಗಿ ಮೇಲ್ಮನವಿ ಮತ್ತೂಂದು ಪೀಠದಲ್ಲಿ ವಿಚಾರಣೆ ನಡೆಯಲಿದೆ. ಯಡಿಯೂರಪ್ಪ ಅವರ ವಿರುದ್ಧ 15 ಡಿನೋಟಿಫಿಕೇಷನ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಹಿಂದೆ ತೀರ್ಪು ನೀಡಿದ್ದ ಹೈಕೋರ್ಟ್‌, ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿ ಕುರಿತು ನ್ಯಾ. ಚಲಮೇಶ್ವರ್‌ ನೇತೃತ್ವದ ವಿಭಾಗೀಯ ಪೀಠ ಈ ಹಿಂದೆ ನಾಲ್ಕೈದು ಬಾರಿ ವಿಚಾರಣೆ ನಡೆಸಿತ್ತು. ಆದರೆ, ಇದೀಗ ನ್ಯಾ. ಚಲಮೇಶ್ವರ್‌ ಪ್ರಕರಣದಿಂದ ಹಿಂದೆ ಸರಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next