Advertisement
ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ದೇವೇಗೌಡರು ಕುಟುಂಬ ಮಕ್ಕಳು,ಮೊಮ್ಮಕ್ಕಳಿಗೆ ಆದ್ಯತೆ ಕೊಟ್ಟಿದ್ದಾರೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ನಡುವೆ ಒಡಕಿಗೆ ಕಾರಣ ಆಗಿದ್ದಾರೆ. ತುಮಕೂರಿನಲ್ಲಿ ಕೈಕಾಲು ಕಟ್ಟಿ ಅಲ್ಲಿನ ಅಭ್ಯರ್ಥಿ ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮಾಡಿದ್ದಾರೆ. ಮೊದಲು ತುಮಕೂರಿನಿಂದ ಗೆದ್ದು ಬನ್ನಿ. ಆ ಮೇಲೆ ಬಿಜೆಪಿ ಬಗ್ಗೆ ಮಾತಾಡೋಣ ಎಂದು ಸವಾಲು ಹಾಕಿದರು. ಎಂಥ ಅತಿರಥ ಮಹಾರಥರೇ ಬಿಜೆಪಿಯನ್ನು ದಕ್ಷಿಣ ಭಾರತದಲ್ಲಿ ಕಿತ್ತು ಹಾಕಲು ಪ್ರಯತ್ನ ಪಟ್ಟರು. ಅವರಿಂದಲೇ ತಡೆಯಲು ಸಾಧ್ಯವಿಲ್ಲ. ಇನ್ನು ನಿಮ್ಮಿಂದ ಅದು ಸಾಧ್ಯವೇ? ಬಿಜೆಪಿ ಬಗ್ಗೆ ಹಗುರವಾಗಿ ಮಾತಾಡಬೇಡಿ. ಮಾಜಿ ಪ್ರಧಾನಿ ಎಂಬುದನ್ನು ಮರೆತು ಕೆಳಮಟ್ಟಕ್ಕೆ ಇಳಿಯುವುದನ್ನು ಬಿಡಿ ಎಂದು ಸಲಹೆ ನೀಡಿದರು.