Advertisement

ನಟ ಚಿರಂಜೀವಿ ಸರ್ಜಾ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ವೈ ಸಂತಾಪ

05:55 PM Jun 07, 2020 | keerthan |

ಬೆಂಗಳೂರು: ಕನ್ನಡದ ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ ಅವರು, ಇನ್ನೂ ಪ್ರವರ್ಧಮಾನಕ್ಕೆ ಬರಬೇಕಿದ್ದ, ಉಜ್ವಲ ಭವಿಷ್ಯವನ್ನು ಹೊಂದಿದ್ದ ಕಲಾವಿದ. ಅವರ ನಿಧನದಿಂದ ಕನ್ನಡ ಚಲನಚಿತ್ರ ರಂಗ ಓರ್ವ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಭಗವಂತ ಚಿರಂಜೀವಿ ಸರ್ಜಾ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

39 ವರ್ಷದ ಪ್ರಾಯದ ಚಿರಂಜೀವಿ ಸರ್ಜಾ ಇಂದು ಹೃದಾಯಾಘಾತದಿಂದ ನಿಧನ ಹೊಂದಿದ್ದಾರೆ. ವಾಯುಪುತ್ರ ಚಿತ್ರದ ಮೂಲಕ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಚಿರಂಜೀವಿ ಸರ್ಜಾ ಸುಮಾರು 22 ಚಿತ್ರಗಳಲ್ಲಿ ನಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next