Advertisement

ಯಾದಗಿರಿ ಪ್ರಗತಿಗೆ ಬಿಎಸ್‌ವೈ ಕೊಡುಗೆ ಅಪಾರ

04:43 PM Jan 04, 2021 | Team Udayavani |

ಯಾದಗಿರಿ: ಯಾದಗಿರಿ ಜಿಲ್ಲಾ ಕೇಂದ್ರವನ್ನಾಗಿಸಿದ್ದಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪಯಾದಗಿರಿ ಅಭಿವೃದ್ಧಿಗೆ ಅಪಾರ ಕಾಳಜಿವಹಿಸಿ ಕೋಟ್ಯಂತರ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆಎಂದು ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.

Advertisement

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಜ.6ರಂದು ಮುಖ್ಯಮಂತ್ರಿ ಬಿಎಸ್‌ವೈ ಆಗಮಿಸಿ ಯಾದಗಿರಿ ಮತಕ್ಷೇತ್ರದಲ್ಲಿ ಅಂದಾಜು 536.91 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.

ನಗರದ ಹೊರವಲಯದಲ್ಲಿ 56 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ 300 ಹಾಸಿಗೆಗಳ ನೂತನ ಜಿಲ್ಲಾಆಸ್ಪತ್ರೆ ಉದ್ಘಾಟಿಸಲಿದ್ದು, ಪಕ್ಕದಲ್ಲೇ ನಿರ್ಮಾಣಮಾಡುತ್ತಿರುವ 325 ಕೋಟಿ ವೆಚ್ಚದ ಯಾದಗಿರಿವೈದ್ಯಕೀಯ ಶಿಕ್ಷಣ ಸಂಸ್ಥೆ ಕಾಮಗಾರಿಗೆ ಅಡಿಗಲ್ಲು ನೆರವೇರಿಸುವರು ಎಂದು ತಿಳಿಸಿದರು.

ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾದ ಮೆಡಿಕಲ್‌ ಕಾಲೇಜು ನಿರ್ಮಾಣವಾಗುತ್ತಿದ್ದು, ಬರುವ ದಿನಗಳಲ್ಲಿ ಈ ಭಾಗದ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಚಿಕಿತ್ಸೆಗೆ ಅನುಕೂಲವಾಗಲಿದೆ ಎಂದರು.ಈ ವೇಳೆ ಮಾಜಿ ಶಾಸಕ ಡಾ| ವೀರಬಸವಂತರಡ್ಡಿಮುದ್ನಾಳ, ಜಿಪಂ ಅಧ್ಯಕ್ಷ ಬಸಣ್ಣಗೌಡ ಯಡಿಯಾಪುರ್‌,ನಗರಸಭೆ ಅಧ್ಯಕ್ಷ ವಿಲಾಸ್‌ ಪಾಟೀಲ್‌, ಉಪಾಧ್ಯಕ್ಷೆ ಪ್ರಭಾವತಿಕಲಾಲ್‌, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ಅನೀತಾಠಾಠೊಡ್‌, ರಾಜಶೇಖರ ಕಾಡಂನೋರ್‌, ಖಂಡಪ್ಪ ದಾಸನ್‌, ಮಹಾದೇವಪ್ಪ ಯಲಸತ್ತಿ, ಸುರೇಶ ಅಂಬಿಗೇರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next