Advertisement
ಎರಡು ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಗೊಂದಲ ಮುಂದುವರಿದ ಹಿನ್ನೆಲೆಯಲ್ಲಿ ಪಕ್ಷದ ಸ್ಥಳೀಯ ಘಟಕಗಳು ಮತ್ತು ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಈ ಸಮಿತಿಗಳನ್ನು ರಚಿಸಲಾಗಿದೆ. ಆರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಐದು ಸಮಿತಿಗಳನ್ನು ರಚಿಸಲಾಗಿದೆ.
ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ, ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್‌ಕುಮಾರ್ ಕಟೀಲು, ಶಾಸಕ ಸಿ.ಟಿ. ರವಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಮತ್ತು ಪ್ರಧಾನ ಕಾರ್ಯದರ್ಶಿ ಮೇಘರಾಜ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ವಿ. ಸೋಮಣ್ಣ, ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್, ಶಾಸಕ ಕೆ.ಜಿ. ಬೋಪಯ್ಯ, ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಸದರಾದ ಕರಡಿ ಸಂಗಣ್ಣ, ಶ್ರೀರಾಮುಲು, ಶಾಸಕರಾದ ಬಿ.ಜಿ. ಪಾಟೀಲ್, ದೊಡ್ಡನಗೌಡ್ರು, ಮಾಜಿ ಶಾಸಕ ವಾರಬಸಂತ ರೆಡ್ಡಿ ಅವರ ಸಮಿತಿ ರಚನೆಯಾಗಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಸದ ಜಿ.ಎಂ. ಸಿದ್ದೇಶ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಮಾಜಿ ಸಂಸದ ಜಿ.ಎಸ್. ಬಸವರಾಜ್, ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್, ಬೆಂಗಳೂರು ಪದವೀದರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಕೇಂದ್ರ ಸಚಿವರಾದ ಅನಂತ್‌ಕುಮಾರ್, ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿಪಕ್ಷದ ಉಪನಾಯಕ ಆರ್. ಅಶೋಕ್, ಶಾಸಕ ಅರವಿಂದ ಲಿಂಬಾವಳಿ ಅವರನ್ನೊಳಗೊಂಡ ಸಮಿತಿ ರಚಿಸಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಈ ಸಮಿತಿಗಳು ನೀಡುವ ವರದಿ ಆಧರಿಸಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತದೆ.