Advertisement

ಜಾರ್ಜ್‌ ರಾಜೀನಾಮೆ: ಬಿಎಸ್‌ವೈ ಆಗ್ರಹ

07:50 AM Sep 06, 2017 | Team Udayavani |

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಸಂಶಯಾಸ್ಪದ ಸಾವಿನ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್‌ ಸಿಬಿಐ ತನಿಖೆಗೆ ವಹಿಸಿರುವ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆಗಾಗಿ ಸಚಿವ ಕೆ.ಜೆ. ಜಾರ್ಜ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆಗ್ರಹಿಸಿದ್ದಾರೆ.

Advertisement

ಸಚಿವ ಜಾರ್ಜ್‌ ಅವರು ಸ್ವಯಂಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದೇ ಇದ್ದಲ್ಲಿ  ಸಿಎಂ ತತ್‌ಕ್ಷಣ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಜತೆಗೆ ಆರೋಪ ಕೇಳಿಬಂದಿರುವ ಐಪಿಎಸ್‌ ಅಧಿಕಾರಿಗಳಾದ ಎಂ.ಎಂ. ಪ್ರಸಾದ್‌ ಮತ್ತು ಪ್ರಣಬ್‌ ಮೊಹಂತಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next