Advertisement
ಎಸ್.ಎಲ್. ಧರ್ಮೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
Related Articles
Advertisement
ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.
ಎಚ್ ಡಿ ಕುಮಾಸರಸ್ವಾಮಿ ಸಂತಾಪ
ವಿಧಾನಪರಿಷತ್ ಉಪಸಭಾಪತಿ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಆತ್ಮಹತ್ಯೆಗೆ ಮುನ್ನ ರೈಲು ಬರುವ ಸಮಯದ ಬಗ್ಗೆ ಮಾಹಿತಿ ಪಡೆದಿದ್ದ ಧರ್ಮೇಗೌಡರು!
ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ
ಕರ್ನಾಟಕ ವಿಧಾನ ಪರಿಷತ್ತಿನ ಹಾಲಿ ಉಪ ಸಭಾಪತಿಯವರು ಮತ್ತು ಕರ್ನಾಟಕ ವಿಧಾನ ಸಭೆಯ ಮಾಜಿ ಶಾಸಕರಾಗಿದ್ದ ಎಸ್.ಎಲ್.ಧರ್ಮೇಗೌಡರವರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ. ಹಿರಿಯ ರಾಜಕಾರಣಿಯೊಬ್ಬರನ್ನು, ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ ಸೂಚಿಸಿದ್ದಾರೆ.