Advertisement

ನಟ ಯಶ್ ಬೇಡಿಕೆಯನ್ನು ಬಜೆಟ್ ನಲ್ಲಿ ಈಡೇರಿಸಿದ ಬಿಎಸ್ ವೈ

09:53 AM Mar 06, 2020 | keerthan |

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಬೇಡಿಕಯೊಂದನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಬಜೆಟ್ ನಲ್ಲಿ ಈಡೇರಿಸಿದ್ದಾರೆ. ಅದುವೇ ಬೆಂಗಳೂರಿನಲ್ಲಿ ಜಾಗತಿಕ ಮಟ್ಟದ ಫಿಲಂ ಸಿಟಿ ನಿರ್ಮಾಣ.

Advertisement

ಕಳೆದ ವಾರವಷ್ಟೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಭಾಗವಹಿಸಿದ್ದ ರಾಕಿಂಗ್ ಸ್ಟಾರ್  ಯಶ್ ಬೆಂಗಳೂರಿನಲ್ಲಿ ಅತ್ಯುತ್ತಮ ಮಟ್ಟದ ಫಿಲಂ ಸಿಟಿಯನ್ನು ನಿರ್ಮಿಸುವಂತೆ ಮುಖ್ಯಮಂತ್ರಿಗಳ ಬಳಿ ಕೇಳಿಕೊಂಡಿದ್ದರು. ಇದೀಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬಜೆಟ್ ನಲ್ಲಿ ಬೆಂಗಳೂರಿನಲ್ಲಿ ಒಟ್ಟು 500 ಕೋಟಿ ರೂ.ಗಳ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಕರ್ನಾಟಕದಲ್ಲಿ ಒಂದು ಉತ್ತಮ ಸ್ಟುಡಿಯೋ ಮಾಡಿಕೊಡಿ. ನಮ್ಮ ಹುಡುಗರಿಗೆ ಶಕ್ತಿ ಇದೆ. ಆದರೆ ನಾವು ಬೇರೆ ಊರಿಗೆ ಹೋಗಿ ಕೆಲಸ ಮಾಡಬೇಕಾಗಿದೆ. ನೀವು ಸ್ಟುಡಿಯೋ ಮಾಡಿಕೊಟ್ಟರೆ ಬದಲಾಗಿ ಜಗತ್ತು ನಮ್ಮತ್ತ ತಿರುಗಿ ನೋಡುವಂತಹ ಚಿತ್ರಗಳನ್ನು ನಾವು ಮಾಡುತ್ತೇವೆ ಎಂದು ಯಶ್ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next