Advertisement

ಪ್ರಾಣರಕ್ಷಣೆ ಮಾಡಿಕೊಳ್ಳಲು ಎಲ್ಲ ರೀತಿಯ ಬಲಪ್ರಯೋಗ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ: BSY

09:02 AM Apr 21, 2020 | keerthan |

ಬೆಂಗಳೂರು: ತಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ, ಪ್ರಾಣ ರಕ್ಷಣೆ ಮಾಡಿಕೊಳ್ಳಲು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ ಇದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಬಿ ಎಸ್ ಯಡಿಯೂರಪ್ಪ, ಪಾದರಾಯಣಪುರದಲ್ಲಿ ಗುಂಡಾವರ್ತನೆ ತೋರಿದವರ ವಿಷಯದಲ್ಲಿ ಮೃದು ಧೋರಣೆಯ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸರ್ವತಂತ್ರ ಸ್ವತಂತ್ರರು. ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ, ಪ್ರಾಣ ರಕ್ಷಣೆ ಮಾಡಿಕೊಳ್ಳಲು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ ಇದೆ ಎಂದಿದ್ಧಾರೆ.

ಬೆಂಗಳೂರಿನ ಪಾದರಾಯನಪುರದಲ್ಲಿ ರವಿವಾರ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ಹೋದ ಕೋವಿಡ್ ಯೋಧರ ವಿರುದ್ಧ ಹಲ್ಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 54 ಜನರನ್ನು ಬಂಧಿಸಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next