ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ರಾಜ್ಯದ ಚರ್ಚೆಯ ವಿಷಯವಾಗಿದೆ. ಬಿಜೆಪಿ ಮಾತ್ರವಲ್ಲದೆ ಇತರ ಪಕ್ಷಗಳಲ್ಲೂ ಈ ಭೇಟಿಯ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಆದರೆ ಸಿಎಂ ರಾಜಧಾನಿ ಭೇಟಿಯ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿಕೆ, ನಿನ್ನೆ ವಿಶೇಷ ವಿಮಾನದಲ್ಲಿ ಪುತ್ರರೊಂದಿಗೆ ದೆಹಲಿಗೆ ತೆರಳಿದ ಯಡಿಯೂರಪ್ಪ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದರು.
ಇದನ್ನೂ ಓದಿ:ಏರ್ ಪೋರ್ಟ್ ಗೆ ಹೊರಟಿದ್ದ ಯಡಿಯೂರಪ್ಪಗೆ ಶಾ ಬುಲಾವ್: ವಾಪಾಸ್ ತೆರಳಿದ ಸಿಎಂ
ರಾಜ್ಯದ ವಿಷಯಗಳನ್ನು ಆರು ಬ್ಯಾಗ್ ನಲ್ಲಿ ಹಾಕಿದ್ದರೋ, ಅಥವಾ ಅದರಲ್ಲಿ ಬೇರೆ ಏನಿತ್ತು ಎನ್ನುವುದು ಗೊತ್ತಿಲ್ಲ. ನಿನ್ನೆ ಪ್ರಧಾನಿಯವರನ್ನು ಭೇಟಿ ಮಾಡಲು ಹೋದಾಗ ಆರು ಬ್ಯಾಗ್ ಗಳೂ ಹೋದವೋ ಅಥವಾ ಅವರು ಒಬ್ಬರೇ ಮಾತ್ರ ಹೋಗಿದ್ದಾರೆಯೇ ಎನ್ನುವುದು ಗೊತ್ತಿಲ್ಲ. ಅದರ ಬಗ್ಗೆ ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.
ಸಿಎಂ ಯಡಿಯೂರಪ್ಪ ಅವರ ಮನವಿಗೆ ಪುರಸ್ಕರಿಸಿ ಪ್ರಧಾನಿಗಳು, ಕೇಂದ್ರ ಸರ್ಕಾರ ಎಷ್ಟು ಗೌರವ ಸಲ್ಲಿಸುತ್ತಾರೆ ಎನ್ನುವುದನ್ನು ಕಾದು ನೋಡೋಣ ಎಂದು ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ: ಬಕ್ರೀದ್ ಹಿನ್ನೆಲೆ : ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಮಂದಿಗೆ ಮಾತ್ರ ಅವಕಾಶ
ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲರಿಗೆ ದೂರು ವಿಚಾರವಾಗಿ ಮಾತನಾಡಿದ ಅವರು, ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿ. ವೈಯಕ್ತಿಕವಾಗಿ ನನ್ನ ಮತ್ತು ಪಕ್ಷದ ಬೆಂಬಲವಿದೆ ಎಂದರು.