ವಿಜಯಪುರ : ಕೋವಿಡ್ ಎರಡನೇ ಅಲೆಯ ಕೊಂಡಿಯನ್ನು ಕಳಚಲು ಮೇ 12ರವರೆಗೆ ಕೋವಿಡ್ ಕರ್ಫ್ಯೂ ನಿಬಂìಧ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು. ಸೋಂಕಿತರಿಗೆ ಹಾಸಿಗೆ, ಆಕ್ಸಿಜನ್, ರೆಮ್‌ಡಿಸಿವಿಯರ್ ಸೇರಿದಂತೆ ಆರೋಗ್ಯ ಸೇವೆ ನೀಡುವಲ್ಲಿ ಯಾವ ಕೊರತೆ ಆಗದಂಥೆ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುರುವಾರ ಜಿಲ್ಲಾ ಉಸ್ತುವಾರಿ ಸಚಿಗೆ ಶಶಿಕಲಾ ಜೊಲ್ಲೆ ಹಾಗೂ ಜಿಲ್ಲಾಡಳಿತದ ಅ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ರೋಗದ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಜಿಲ್ಲಾಧಿಕಾರಿ ಸುನೀಲಕುಮಾರ ಅವರಿಗೆ ನಿರ್ದೇಶನ ನೀಡಿದ ಮುಖ್ಯಮಂತ್ರಿ, ಸೋಂಕಿತರ ತ್ವರಿತ ಪತ್ತೆಗೆ ಗಂಟಲು ದ್ರವ ಮಾದರಿ ಸಂಗ್ರಹ, ಪರೀಕ್ಷೆ ನಡೆಸಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ವಸತಿ ನಿಲಯಗಳು, ಕಲ್ಯಾಣ ಮಂಟಪಗಳನ್ನು ಹಾಸಿಗೆಗಳಿಗೆ ಸಿದ್ಧತೆಯಲ್ಲಿ ಇಟ್ಟುಕೊಳ್ಳಿ ಎಂದು ಸೂಚಿಸಿದರು.
ನಗರ ಪ್ರದೇಶಕ್ಕೆ ಗುಳೆ ಹೋಗಿದ್ದವರು ಕೋವಿಡ್ ಹಾಗೂ ಕರ್ಫ್ಯೂ ಹಿನ್ನೆಲೆಯಲ್ಲಿ ಹಳ್ಳಿಗಳಿಗೆ ಮರಳಿದ್ದಾರೆ. ಹೀಗೆ ಹಳ್ಳಿಗೆ ಮರಳಿದವರು ಕೂಲಿ ಕೆಲಸ ಕೇಳಿದರೆ ತಕ್ಷಣವೇ ಮಹಾತ್ಮ ಗಾಂ ಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ ಕಲ್ಪಿಸುವಂತೆ ತಾಕೀತು ಮಾಡಿದರು. ಮೇ ಮಧ್ಯಾವ ಧಿವರೆಗೆ ಜಾರಿಯಲ್ಲಿರುವ ಕೋವಿಡ್ ಕರ್ಫ್ಯೂ ನಿಬಂìಧ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು.
ಕೋವಿಡ್ ಸೋಂಕಿತ ರೋಗಿಗಳಿಗೆ ಆಕ್ಸಿಜನ್, ಹಾಸಿಗೆ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಸ್ವಾÂಬ್ ಪರೀಕ್ಷೆ ಅಗತ್ಯಕ್ಕೆ ತಕ್ಕಂತೆ ಪರೀಕ್ಷೆಗೆ ಒಳಪಡಿಸಬೇಕು. ಅವಶ್ಯಕ ಸಂದರ್ಭಗಳಲ್ಲಿ ವಸತಿ ನಿಲಯಗಳು, ಕಲ್ಯಾಣ ಮಂಟಪಗಳನ್ನು ಹಾಸಿಗೆಗಳಿಗೆ ಸಿದ್ಧತೆಯಲ್ಲಿ ಇಟ್ಟುಕೊಳ್ಳಬೇಕು. ಅನವಶ್ಯಕವಾಗಿ ರೆಮ್ ಡಿಸಿವರ್ ಲಸಿಕೆ ಬಳಕೆಯಾಗದಂತೆ ನಿಗಾ ಇಡಬೇಕು. ಗುಳೆ ಹೋಗಿ ಬಂದವರಿಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ದೊರಕಿಸಿಕೊಡಲು ಸೂಚನೆ ನೀಡಿದರು.
ಶಾಸಕ ಅರುಣ ಶಹಾಪುರ, ಬೀಜ-ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಜಿ.ಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಅನುಪಮ್ ಅಗರವಾಲ, ಎಡಿಸಿ ರಮೇಶ ಕಳಸದ ಸೇರಿದಂತೆ ಇತರರು ಇದ್ದರು.