Advertisement

ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

05:03 PM May 30, 2020 | keerthan |

ಮಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

Advertisement

ಮಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಎಲ್ಲರೂ ಒಂದಾಗಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ.  ಅಭಿವೃದ್ಧಿ ದೃಷ್ಟಿಯಿಂದ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.

ಪಕ್ಷದ ಒಳಗೆ ಯಾವುದೇ ಅಶಿಸ್ತನ್ನು ಸಹಿಸುವುದಿಲ್ಲ. ಅಶಿಸ್ತಿನ ವಿರುದ್ಧ ಹೈಕಮಾಂಡ್ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದ ಅವರು ಭಿನ್ನಾಭಿಪ್ರಾಯ ಆಗಿದೆ ಎಂದು ಡಿಕೆ ಶಿವಕುಮಾರ್ ಹಗಲುಗನಸು ಕಾಣುತ್ತಿದ್ದಾರೆ. ಆದರೆ ಸರ್ಕಾರ ಪೂರ್ಣಾವಧಿಯನ್ನು ಯಶಸ್ವಿಯಾಗಿ ಪೂರೈಸುತ್ತದೆ. ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಆಗಿರುತ್ತಾರೆ ಎಂದು ಕಟೀಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next