Advertisement
ಇದು ಲಿಂಗಾಯತ ನಾಯಕರು ಮತ್ತು ಮಠಾಧೀಶರು ನೀಡಿರುವ ನೇರ ಎಚ್ಚರಿಕೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರದು ಎನ್ನಲಾದ ಆಡಿಯೋ ಬಹಿರಂಗವಾದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಇನ್ನಷ್ಟು ಬಿಸಿ ಪಡೆದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಯಡಿಯೂರಪ್ಪ, ವಲಸಿಗ ಸಚಿವರು ಮತ್ತು ಸಿಎಂ ಬೆಂಬಲಿಗರು ಮೌನಕ್ಕೆ ಶರಣಾಗಿದ್ದಾರೆ.
ಘಟನೆಯ ಬಗ್ಗೆ ಯಡಿಯೂರಪ್ಪ ಆಪ್ತ ಸಚಿವರ ಎದುರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಶೆಟ್ಟರ್ ದಿಲ್ಲಿಗೆ
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವ ಸಚಿವ ಮುರುಗೇಶ್ ನಿರಾಣಿ ದಿಢೀರ್ ವಾರಾಣಸಿಗೆ ಭೇಟಿ ನೀಡಿದ್ದಾರೆ. ಈ ನಡುವೆ ಸಚಿವ ಜಗದೀಶ್ ಶೆಟ್ಟರ್ ಇಲಾಖೆ ಕೆಲಸದ ಮೇಲೆ ಗುಜರಾತ್‌ಗೆ ತೆರಳಿ ಅಲ್ಲಿಂದ ದಿಲ್ಲಿಗೆ ಹೋಗಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹೊàಟ್ ಅವರೂ ದಿಲ್ಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ.
Related Articles
ಯಡಿಯೂರಪ್ಪ ಜು. 26ರಂದು ರಾಜ್ಯಪಾಲರನ್ನು ಭೇಟಿಯಾಗಲು ಸಮಯ ಕೇಳಿದ್ದಾರೆ ಎನ್ನಲಾಗಿದ್ದು, ಇದು ವಿರೋಧಿ ಬಣದಲ್ಲಿ ಕುತೂಹಲ ಮೂಡಿಸಿದೆ. ಜತೆಗೆ ಅಂದೇ ವಿಧಾನಸಭೆ ಸಚಿವಾಲಯದ ಸಿಬಂದಿಗೆ ಭೋಜನ ಕೂಟ ಏರ್ಪಡಿಸಿದ್ದು, ಗ್ರೂಪ್ ಫೋಟೊ ತೆಗೆಸಿಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
Advertisement
ಲಿಂಗಾಯತರ ಬೆಂಬಲವೀರಶೈವ-ಲಿಂಗಾಯತ ಮುಖಂಡರು, ಕಾಂಗ್ರೆಸ್ ನಾಯಕರಾದ ಎಂ.ಬಿ. ಪಾಟೀಲ್ ಮತ್ತು ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಬಾಳೆಹೊನ್ನೂರು ಪೀಠದ ರಂಭಾಪುರಿ ಸ್ವಾಮೀಜಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಬೆನ್ನಿಗೆ ನಿಲ್ಲುವ ಮೂಲಕ ಬಿಜೆಪಿ ವರಿಷ್ಠರಿಗೆ ಸಂದೇಶ ರವಾನೆ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಲಿಂಗಾ ಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಅವರ ವಯಸ್ಸು ಮತ್ತು ಕೊಡುಗೆ ಪರಿಗಣಿಸಿ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದು ಎಂ.ಬಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ. ಸೋಮವಾರ ಸಂಜೆ ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ದರು. ಬಳಿಕ ಮಾಧ್ಯಮದ ಜತೆ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯವು ಯಡಿ ಯೂರಪ್ಪ ಪರವಾಗಿದ್ದು, ಅವರನ್ನೇ ಮುಖ್ಯ ಮಂತ್ರಿಯಾಗಿ ಮುಂದುವರಿಸಬೇಕು ಎಂದರು. ನಿಜಲಿಂಗಪ್ಪ, ಜೆ.ಎಚ್. ಪಟೇಲ್, ವೀರೇಂದ್ರ ಪಾಟೀಲ್, ಎಸ್.ಆರ್. ಬೊಮ್ಮಾಯಿ ಬದ ಲಾವಣೆ ಸಂದರ್ಭದಲ್ಲಿ ನಡೆದಿರುವುದು ಮರು ಕಳಿಸಲಿದೆ ಎಂದಿರುವುದು ಮಹತ್ವ ಪಡೆದಿದೆ.