Advertisement

ಆಕ್ಸಿಜನ್ ವಿತರಣೆಯಲ್ಲಿ ವ್ಯತ್ಯಾಸವಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ

08:09 PM May 12, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ವ್ಯಾಕ್ಸಿನ್ ಬಗ್ಗೆ ಇರುವ ಗೊಂದಲ‌ ಹಾಗೂ ಆಯಾಯ ಜಿಲ್ಲೆಗಳಲ್ಲಿ ಆಕ್ಸಿಜನ್ ಸಪ್ಲೆ ಚೈನ್‌ನಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

Advertisement

ಬುಧವಾರ ಸಿಎಂ ಬಿಎಸ್ ವೈ ಅವರು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ನಿಯಂತ್ರಣದ ಕುರಿತು ಚರ್ಚೆ ನಡೆಸಿ ಆಯಾಯ ಜಿಲ್ಲೆಯ ಅಧಿಕಾರಿಗಳಿಗೆ ಕೋವಿಡ್ ನಿವಾರಣೆ ಕುರಿತು ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಗಳ ಸಮಯ ಬದಲಾವಣೆ

ಸಚಿವರು, ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ವ್ಯಾಕ್ಸಿನ್ ಬಗ್ಗೆ ಇರುವ ಗೊಂದಲ‌ವನ್ನು ಆದಷ್ಟು ಬೇಗ ನಿವಾರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು, ಜಿಲ್ಲೆಗಳಲ್ಲಿ ಆಕ್ಸಿಜನ್ ಸಪ್ಲೈ ಚೈನ್‌ನಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು, ಆಕ್ಸಿಜನ್ ಸಿಲಿಂಡರ್ ಲಭ್ಯತೆ ಇದ್ದು ಜಿಲ್ಲೆಗಳಲ್ಲಿ ಕೊರತೆ ಉಂಟಾದರೆ ಕೂಡಲೇ ಬಗೆಹರಿಸಬೇಕು, ಆಕ್ಸಿಜನ್ ಮತ್ತು ಐಸಿಯು ಬೆಡ್ ಗಳ ಸಂಖ್ಯೆ ಹೆಚ್ಚಿಸುವತ್ತ ಗಮನ ಹರಿಸಬೇಕು, ಪ್ರತಿ ಜಿಲ್ಲೆಯ ವ್ಯಾಕ್ಸಿನ್ ಲಭ್ಯತೆ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಇರಬೇಕು, ಸೆಕೆಂಡ್ ಡೋಸ್ ವ್ಯಾಕ್ಸಿನ್ ಪಡೆಯುವವರಿಗೆ ಮೊದಲ ಆದ್ಯತೆ ಕೊಡಬೇಕು ಅಲ್ಲದೆ ವ್ಯಾಕ್ಸಿನ್ ಪೂರೈಸುವ ಕಂಪನಿಗಳ ‌ಜೊತೆ ನಿರಂತರವಾಗಿ ಸಂಪರ್ಕ‌ ಇಟ್ಟುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next