Advertisement

ಪೌರತ್ವ ಪ್ರತಿಭಟನೆ: ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಮೀಟಿಂಗ್

09:58 AM Dec 20, 2019 | keerthan |

ಬೆಂಗಳೂರು: ಪೌರತ್ವ ಕಾಯ್ದೆ ವಿರುದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

Advertisement

ಪೊಲೀಸ್ ‌ಮಹಾನಿರ್ದೇಶಕರಾದ ನೀಲಮಣಿರಾಜು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಗರ ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಜ್ಯದಲ್ಲಿ ಇಂದು ಪ್ರತಿಭಟನೆಗೆ ಕರೆನೀಡಿರುವ ಕಾರಣ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆದರೆ ಸಂಚಾರ ವ್ಯವಸ್ಥೆ, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next