ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶವು ತೃಪ್ತಿದಾಯಕವಾಗಿದ್ದು, ಮೊದಲ ಬಾರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿದ್ದು, ಇದೊಂದು ಐತಿಹಾಸಿಕ ಗೆಲುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸಂಸದರು, ಶಾಸಕರ ಹಾಗೂ ವಿಧಾನಪರಿಷತ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಪುನಃ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.
ಇದನ್ನೂ ಓದಿ:ಕಲಬುರಗಿ ಪಾಲಿಕೆ ಅತಂತ್ರ: ಬಿಜೆಪಿ ನಿರೀಕ್ಷೆಮೀರಿ ಸಾಧನೆ,ಕಿಂಗ್ ಮೇಕರ್ ಸ್ಥಾನದಲ್ಲಿ ಜೆಡಿಎಸ್
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀಯವರ ಜನಪರ ಯೋಜನೆಗಳು, ಸಾಧನೆಗಳು ಚುನಾವಣೆ ಮೇಲೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಈ ಫಲಿತಾಂಶ ನಿದರ್ಶನ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ನಂತರ ಉತ್ತಮ ಫಲಿತಾಂಶ ಬಂದಿದೆ. ಸಂಸದರು, ಶಾಸಕರು,ಪಕ್ಷದ ಮುಖಂಡರು ತೃಪ್ತಿದಾಯವಾಗಿದೆ. ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಫಲಿತಾಂಶವು ಒಟ್ಟಾರೆಯಾಗಿ ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಅಭಿವೃದ್ಧಿಪರ ಆಡಳಿತ ನೀಡಲಿದೆ ಎಂದು ಬಿಎಸ್ ವೈ ಹೇಳಿದರು.
ಈ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಮತದಾರರಿಗೆ ಹಾಗೂ ಮುಖಂಡರಿಗೆ ತುಂಬು ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ವೈ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.