Advertisement

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಅಧಿಕಾರಿಗಳ ವೇತನ ಸಮಿತಿ ರಚನೆಗೆ ಬಿಎಸ್‌ವೈ ಮನವಿ

09:16 PM Mar 03, 2022 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಮತ್ತು ಭತ್ಯೆ ಪರೀಷ್ಕರಿಸಲು  ಅಧಿಕಾರಿಗಳ ವೇತನ ಸಮಿತಿ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರಿಗೆ ಪತ್ರ ಬರೆದಿದ್ದಾರೆ.

Advertisement

ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಯಡಿಯೂರಪ್ಪ  ಸರ್ಕಾರಿ ನೌಕರರು ರಾಜ್ಯದ ಸಾಮನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ. ಕೊವಿಡ್‌ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಜನರ ಆರೋಗ್ಯ ರಕ್ಷಣೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಸರ್ಕಾರಕ್ಕೆ ಒಳ್ಳೆಯ ಹೆಸರು ಬಂದಿದೆ.

ರಾಜ್ಯ ಸರ್ಕಾರ ಪ್ರತಿ ಐದು ವರ್ಷಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಿಸುವ ಸಂಪ್ರದಾಯ ಬೆಳೆಸಿಕೊಂಡು ಬರಲಾಗುತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ 5ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೆ ತರಲಾಗಿತ್ತು. ಕೇಂದ್ರ ಸರ್ಕಾರ 2016 ರ 7 ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತಂದಿದೆ. ಅದರಂತೆ ದೇಶದ 25 ರಾಜ್ಯಗಳಲ್ಲಿ ಕೇಂದ್ರ ಮಾದರಿಯ ವೇತನ ಜಾರಿಯಲ್ಲಿದೆ. ರಾಜ್ಯದ ಜಿಎಸ್‌ಡಿಪಿ ಗಮನಿಸಿದಾಗ ಕರ್ನಾಟಕ ದೇಶದಲ್ಲಿ ಆರ್ಥಿಕ ಬೆಳವಣಿಗೆಯಲ್ಲಿ 6ನೇ ಸ್ಥಾನದಲ್ಲಿದೆ. ರಾಜ್ಯದ ಅಭಿವೃದ್ದಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಕೇಂದ್ರ ಮಾದರಿಯ ವೇತನ ಜಾರಿಗೆ ಅಧಿಕಾರಿಗಳ ವೇತನ ಸಮಿತಿ ರಚಿಸುವಂತೆ ಮನವಿ ಮಾಡಿದ್ದಾರೆ. ಆದ್ದರಿಂದ ನೌಕರರ ಬೇಡಿಕೆಯಂತೆ 2022-23ನೇ ಸಾಲಿನ ಬಜೆಟ್‌ನಲ್ಲಿ  ಅಧಿಕಾರಿಗಳ ವೇತನ ಸಮಿತಿ ರಚನೆ ಮಾಡುವ ಬಗ್ಗೆ ಘೋಷಣೆ ಮಾಡುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next