Advertisement

ಸಚಿವಾಕಾಂಕ್ಷಿಗಳ ಲಾಬಿ; ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂದ ಬಿಎಸ್‌ವೈ

10:01 AM Dec 19, 2019 | mahesh |

ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿ ಶಾಸಕರು ಸಚಿವ ಸ್ಥಾನ, ಖಾತೆಗೆ ಪಟ್ಟು ಹಿಡಿಯುತ್ತಿರುವ ಬೆನ್ನಲ್ಲೇ ಮೂಲ ಬಿಜೆಪಿಗರೂ ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿಗಳಿಗೆ ದುಂಬಾಲು ಬಿದ್ದಿದ್ದಾರೆ. ಇನ್ನೊಂದೆಡೆ ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಒತ್ತಡದ ನಡುವೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಈಗಿರುವ ಉಪಮುಖ್ಯಮಂತ್ರಿ ಸ್ಥಾನವೇ ಅಗತ್ಯವಿಲ್ಲ ಎಂದು ಹೇಳಿರುವುದು ಪರ- ವಿರೋಧದ ಚರ್ಚೆಗೆ ಇನ್ನಷ್ಟು ಪುಷ್ಟಿ ನೀಡಿದೆ.

Advertisement

ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಸಿಎಂ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ ಯಾಗಿ ಚರ್ಚಿಸಿದ ಬೆನ್ನಲ್ಲೇ ಸಚಿವಾಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ.  ಈ ನಡುವೆ ಉಪಚುನಾವಣೆಯಲ್ಲಿ ಗೆದ್ದವರಿಗಷ್ಟೇ ಸಚಿವ ಸ್ಥಾನ, ಉಳಿದವರಿಗೆ ಸಚಿವ ಸ್ಥಾನದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳುವ ಮೂಲಕ ಉಪಚುನಾವಣೆಯ ಪರಾಜಿತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂಬ ಪರೋಕ್ಷ ಸಂದೇಶ ರವಾನಿಸಿದರು. ಜತೆಗೆ ಡಿ. 25ರ ಬಳಿಕ ದಿಲ್ಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಾಗಿ ಹೇಳಿರುವುದರಿಂದ ಸಚಿವಾಕಾಂಕ್ಷಿಗಳ ಒತ್ತಡವೂ ಹೆಚ್ಚಾಗಿದೆ.

ಮುಖ್ಯಮಂತ್ರಿಗಳ ಡಾಲರ್ ಕಾಲನಿಯ ನಿವಾಸವು ಸೋಮವಾರ ಬೆಳಗ್ಗೆ ಬಿರುಸಿನ ರಾಜಕೀಯ ಚಟುವಟಿಕೆ ತಾಣವಾಗಿ ಪರಿವರ್ತನೆಯಾಗಿತ್ತು. ಸಚಿವಕಾಂಕ್ಷಿಗಳು, ಉಪಮುಖ್ಯಮಂತ್ರಿ ಆಕಾಂಕ್ಷಿಗಳು, ಸ್ಥಾನಮಾನದ ನಿರೀಕ್ಷೆಯಲ್ಲಿರುವ ಶಾಸಕರು, ಪ್ರಭಾವಿ ಖಾತೆ ಬಯಸುವ ಸಚಿವರ ಮ್ಯಾರಥಾನ್‌ ಭೇಟಿ, ಮಾತುಕತೆ ನಡೆದಿತ್ತು.

ಹಿರಿಯ ಶಾಸಕ ಉಮೇಶ್‌ ಕತ್ತಿ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಲಾಬಿ ನಡೆಸುತ್ತಿರುವ ಬೆನ್ನಲ್ಲೇ ಉಮೇಶ್‌ ಕತ್ತಿ ಅವರು ಸಚಿವ ಸ್ಥಾನಕ್ಕೆ ಮನವಿ ಮುಂದುವರಿಸಿದ್ದಾರೆ ಎನ್ನಲಾಗಿದೆ. ರಮೇಶ್‌ ಜಾರಕಿಹೊಳಿಯವರು ಕೂಡ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಹಿಂದೆ ಮಾತು ನೀಡಿದ್ದಂತೆ ಜಲ ಸಂಪನ್ಮೂಲ ಖಾತೆ ಜತೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೋರಿದರು ಎಂದು ಹೇಳಲಾಗಿದೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಯಡಿಯೂರಪ್ಪ
ಅವರನ್ನು ಭೇಟಿಯಾಗಿದ್ದರು. ಶ್ರೀರಾಮುಲು ಪರ ಸೋಮಶೇಖರ ರೆಡ್ಡಿ
ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಶ್ರೀರಾಮುಲು ಅವರಿಗೆ ಉಪ ಮುಖ್ಯ ಮಂತ್ರಿ ಸ್ಥಾನ ನೀಡಬೇಕು. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಸ್ಥಾನಮಾನ ಕಲ್ಪಿಸಬೇಕು ಎಂದು ರಾಮುಲು ಪರವಾಗಿ ಸೋಮಶೇಖರ ರೆಡ್ಡಿ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

Advertisement

ಡಿ.21 ಇಲ್ಲವೇ 22ರಂದು ದಿಲ್ಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುವುದು. ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡ ಲಾಗಿತ್ತು. ಅದರಂತೆ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುವುದು.
-ಬಿ.ಎಸ್‌. ಯಡಿಯೂರಪ್ಪ , ಮುಖ್ಯಮಂತ್ರಿ

ಪಕ್ಷದ ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ ಅವರಷ್ಟೇ ಬಿಜೆಪಿ ಸೇರುತ್ತಾರೋ ಅಥವಾ ಇನ್ನಷ್ಟು ಮಂದಿ ಬಿಜೆಪಿ ಸೇರು ತ್ತಾರೋ ಗೊತ್ತಿಲ್ಲ. ಶಾಸಕರಿಗೆ ಈಗ ಮೊದಲಿ ನಷ್ಟು ಬೇಡಿಕೆ ಇಲ್ಲ. ಹೋದವರಿಗೂ ಪ್ರಯೋಜನವೂ ಆಗುವುದಿಲ್ಲ.
– ಬಸವರಾಜ ಹೊರಟ್ಟಿ , ಜೆಡಿಎಸ್‌ ನಾಯಕ

Advertisement

Udayavani is now on Telegram. Click here to join our channel and stay updated with the latest news.

Next