Advertisement

24 ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದ ಸಿಎಂ ಯಡಿಯೂರಪ್ಪ

02:26 PM Jul 27, 2020 | keerthan |

ಬೆಂಗಳೂರು: ರಾಜ್ಯದ ಬಿಎಸ್ ಯಡಿಯೂರಪ್ಪ ಸರ್ಕಾರಕ್ಕೆ ಒಂದು ವರ್ಷದ ತುಂಬಿದ ಸಂದರ್ಭದಲ್ಲಿ ಶಾಸಕರಿಗೆ ನಿಗಮ ಮಂಡಳಿ ಜವಾಬ್ದಾರಿ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 24 ಶಾಸಕರನ್ನು ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಸಂಜೆಯೊಳಗೆ ಅಧಿಕೃತ ಆದೇಶ ಹೊರಡುವ ಸಾಧ್ಯತೆಯಿದೆ.

Advertisement

ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ: ಕರ್ನಾಟಕ ಗೃಹ ಮಂಡಳಿ, ಬೆಂಗಳೂರು

ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ

ಶೋನಾಪುರ ಶಾಸಕ ನರಸಿಂಹ ನಾಯಕ್ ( ರಾಜು ಗೌಡ): ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ: ಕರ್ನಾಟಕ ಮಾರುಕಟ್ಟೆ ಕನ್ಸಲ್ಟೆಂಟ್ ಮತ್ತು ಏಜೆನ್ಸಿಸ್ ಲಿಮಿಟೆಡ್

Advertisement

ಮುದ್ದೇಬಿಹಾಳ ಶಾಸಕ ಎ ಎಸ್ ಪಾಟೀಲ್: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ

ಸಾಗರ ಶಾಸಕ ಎಚ್ ಹಾಲಪ್ಪ: ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ

ಚಿತ್ರದುರ್ಗ ಶಾಸಕ ಜೆ ಎಚ್ ತಿಪ್ಪಾರೆಡ್ಡಿ: ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ

ದೇವದುರ್ಗ ಶಾಸಕ ಶಿವನಗೌಡ ನಾಯಕ್: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ

ರೋಣ ಶಾಸಕ ಕಳಕಪ್ಪ ಗುರುಶಾಂತಪ್ಪ ಬಂಡಿ: ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ

ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ

ತೇರದಾಳ ಶಾಸಕ ಸಿದ್ದು ಸವದಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮತ.

ಹಾಸನ ಶಾಸಕ ಪ್ರೀತಮ್ ಗೌಡ: ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ.

ಸೇಡಂ ಶಾಸಕ ರಾಜ್ ಕುಮಾರ್ ಪಾಟೀಲ್: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲಬುರಗಿ

ಗುಲ್ಬರ್ಗ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ, ಕಲಬುರಗಿ

ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ: ಕರ್ನಾಟಕ ನಗರ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ

ತಿಪಟೂರು ಶಾಸಕ ಎಚ್ ನಾಗೇಶ್: ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ

ಜಗಳೂರು ಶಾಸಕ ಎಸ್ ವಿ ರಾಮಚಂದ್ರ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ.

ಹಾವೇರಿ ಶಾಸಕ ಓಲೇಕಾರ್ ನೆಹರು ಚನ್ನಬಸಪ್ಪ: ಡಾ. ಭಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ

ರಾಯಭಾಗ ಶಾಸಕ ಐಹೊಳೆ ದುರ್ಯೋಧನ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ

ಕಾಪು ಶಾಸಕ ಲಾಲಾಜಿ ಮೆಂಡನ್: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ

ಕನಕಗಿರಿ ಶಾಸಕ ಬಸವರಾಜ ದಡೇಸೂರ್: ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ

ರಾಯಚೂರು ಶಾಸಕ ಡಾ ಎಸ್ ಶಿವರಾಜ್ ಪಾಟೀಲ್: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ

ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ

Advertisement

Udayavani is now on Telegram. Click here to join our channel and stay updated with the latest news.

Next